ಧಾರವಾಡ: ಧಾರವಾಡದ ಜಿಲ್ಲಾಧಿಕಾರಿಯಾಗಿದ್ದ ಗುರುದತ್ತ ಹೆಗಡೆ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿದೆ.
ಧಾರವಾಡದ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯಾ ಪ್ರಭು ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. 2014ನೇ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ದಿವ್ಯಾ ಪ್ರಭು ಅವರು ಧಾರವಾಡದ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಗುರುದತ್ತ ಹೆಗಡೆ ಅವರನ್ನು ಎಲ್ಲಿಗೆ ವರ್ಗಾವಣೆ ಮಾಡಲಾಗಿದೆ ಎಂಬುದನ್ನು ರಾಜ್ಯ ಸರ್ಕಾರ ಆದೇಶದ ಪ್ರತಿಯಲ್ಲಿ ತಿಳಿಸಿಲ್ಲ.