News Karnataka Kannada
Friday, May 03 2024
ಹುಬ್ಬಳ್ಳಿ-ಧಾರವಾಡ

ಹನುಮಾನ್‌ ಚಾಲೀಸಾ ಎಫ್‌ಐಆರ್‌ ಪ್ರಕರಣ : ಕೂಡಲೇ ಕೈ ಬಿಡುವಂತೆ ಜೋಶಿ ಆಗ್ರಹ

ನಗರ್ತ ಪೇಟೆಯ ಮೊಬೈಲ್‌ ಅಂಗಡಿಯೊಂದರಲ್ಲಿ ಇತ್ತೀಚೆಗೆ ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆಸಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಹಲ್ಲೆಗೊಳಗಾದ ವ್ಯಕ್ತಿಯ ಮೇಲೆಯೇ ದೂರು ದಾಖಲಾಗಿರುವುದನ್ನು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕಟುವಾಗಿ ಖಂಡಿಸಿದ್ದಾರೆ.
Photo Credit : NewsKarnataka

ಹುಬ್ಬಳ್ಳಿ: ನಗರ್ತ ಪೇಟೆಯ ಮೊಬೈಲ್‌ ಅಂಗಡಿಯೊಂದರಲ್ಲಿ ಇತ್ತೀಚೆಗೆ ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆಸಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಹಲ್ಲೆಗೊಳಗಾದ ವ್ಯಕ್ತಿಯ ಮೇಲೆಯೇ ದೂರು ದಾಖಲಾಗಿರುವುದನ್ನು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕಟುವಾಗಿ ಖಂಡಿಸಿದ್ದಾರೆ.

ಅವರು ಹುಬ್ಬಳ್ಳಿಯಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಲ್ಹಾದ್‌ ಜೋಶಿ, ರಾಜ್ಯ ಕಾಂಗ್ರೆಸ್ ಸರ್ಕಾರ ಹನುಮಾನ್ ಚಾಲೀಸಾ ಆಡಿಯೊ ಹಾಕಿದ್ದವರ ಮೇಲೆ ಎಫ್‌ಐಆರ್‌ ಹಾಕಿರುವುದು ಎಷ್ಟು ಸರಿ? ಇವರೇನು ಕರ್ನಾಟಕವನ್ನು ಆಳುತ್ತಿದ್ದಾರೋ? ಅಥವಾ ಮೂಲಭೂತವಾದಿ ಇಸ್ಲಾಮಿಕ್ ರಾಷ್ಟ್ರವನ್ನು ಆಳುತ್ತಿದ್ದಾರೋ? ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಕರ್ನಾಟಕವನ್ನು ಪಾಕಿಸ್ತಾನಕ್ಕಿಂತಲೂ ಕಡೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹನುಮಾನ್ ಚಾಲೀಸಾವನ್ನು ಹಾಕಿದ ಕಾರಣಕ್ಕೆ ಹಲ್ಲೆಗೊಳಗಾದ ಅಂಗಡಿಯಾತನ ಮೇಲೆ ಹಾಕಲಾಗಿರುವ ಎಫ್‌ಐಆರ್‌ ಅನ್ನು ರಾಜ್ಯ ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದರು.

ಹನುಮಾನ್ ಚಾಲೀಸಾ ಪಠಣ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದಾಗಲೂ ಹೀಗೇ ಹಿಂದೂ ವಿರೋಧಿ ನಡೆ ತೋರಿದೆ ಎಂದು ಪ್ರಲ್ಹಾದ್‌ ಜೋಶಿ ಹರಿಹಾಯ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು