ಧಾರವಾಡ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಹುಬ್ಬಳ್ಳಿ-ಧಾರವಾಡ ಪಾಲಿಕೆ ಠರಾವಿಗೆ ತಡೆಯಾಜ್ಞೆ ಕೋರಿ ಅಂಜುಮನ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ.
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಐದು ವರ್ಷಗಳ ಅನುಮತಿಗೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಠರಾವು ಪಾಸ್ ಮಾಡಿತ್ತು. ಇದನ್ನು ವಿರೋಧಿಸಿದ ಅಂಜುಮನ್ ಸಂಸ್ಥೆ, ಹುಬ್ಬಳ್ಳಿ-ಧಾರವಾಡ ಪಾಲಿಕೆ ಠರಾವಿಗೆ ತಡೆಯಾಜ್ಞೆ ನೀಡುವಂತೆ ಧಾರವಾಡ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ಇಂದು (ಸೆ.15) ಈ ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಕೋರ್ಟ್, ಅಂಜುಮನ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ ಪಾಲಿಕೆ ಆಯುಕ್ತರಿಗೆ ಅರ್ಜಿ ಸಲ್ಲಿಸಿ ಎಂದು ಸೂಚನೆ ನೀಡಿದೆ. ಆ ಮೂಲಕ ಈದ್ಗಾ ಮೈದಾನದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಡುವುದು ಪಾಲಿಕೆಗೆ ಬಿಟ್ಟಂತಾಗಿದೆ.