ಲೋಕಸಭಾ ಚುನಾವಣೆ: ಹುಬ್ಬಳ್ಳಿ, ಧಾರವಾಡದಲ್ಲಿ ಬಿರುಸಿನ ಮತದಾನ

ಹುಬ್ಬಳ್ಳಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮತದಾನ ಪ್ರಕ್ರಿಯೆ ನಡೆದಿದ್ದು ಹುಬ್ಬಳ್ಳಿಯಲ್ಲಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಪ್ರಲ್ಲಾದ ಜೋಶಿ ಅವರು ಕುಟುಂಬ ಸಮೇತ ಮತದಾನ ಮಾಡಿದರು. ನಂತರ ಎಲ್ಲರೂ ಸಹ ಮತ ಹಾಕಿ ಸದೃಢ ದೇಶ ಕಟ್ಟೋಣಾ ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಹಾಗೂ ಸಂಬಂಧಿಕರು ಉಪಸ್ಥಿತರಿದ್ದರು.

ಇನ್ನು ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ ಅವರು ತಮ್ಮ ಕುಟುಂಬ ಸಮೇತ ಮತದಾನ ಮಾಡಿ ನಾವು ಮತದಾನ ಮಾಡಿದ್ದೇವೆ, ನೀವು ಬನ್ನಿ ಎಲ್ಲರೂ ಮತದಾನ ಮಾಡಿ ದೇಶದ ಅಭಿವೃದ್ಧಿಗೆ ಎಂದು ಮನವಿ ಮಾಡಿಕೊಂಡಿದ್ದಾರೆ.

ಇತ್ತ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ವಿನೋದ ಅಸೂಟಿ ನವಲಗುಂದದ ಮತಗಟ್ಟೆ 85ರಲ್ಲಿ ತಮ್ಮ ಹಕ್ಕು ಚಲಾಯಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ತಪ್ಪದೇ ಚಲಾಯಿಸಬೇಕು ಎಂದು ಮನವಿ ಮಾಡಿದ ವಿನೋದ ಅಸೂಟಿ, ಎಲ್ಲರೂ ಈ ಪ್ರಜಾತಂತ್ರದ ಹಬ್ಬದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.

ಹಾಗು , ನವಲಗುಂದ ಕ್ಷೇತ್ರದ ಶಾಸಕ ಎನ್ ಎಚ್ ಕೋನರೆಡ್ಡಿ, ಅವರು ನವಲಗುಂದ ತಾಲೂಕಿನ ಚಿಲಕವಾಡದ ಮತಗಟ್ಟೆ ಸಂಖ್ಯೆ 117 ರಲ್ಲಿ ಮತ ಚಲಾಯಿಸಿದ್ರು. ಶಾಸಕ ಎನ್ ಎಚ್ ಕೋನರೆಡ್ಡಿ, ಅವರ ಧರ್ಮಪತ್ನಿ ಪ್ರೇಮಾ ಕೋನರೆಡ್ಡಿ, ಪುತ್ರ ನವೀನ ಕೋನರೆಡ್ಡಿ, ಪುತ್ರಿ ನಿವೇದಿತಾ ಕೋನರೆಡ್ಡಿ, ರಾಜೇಶ ಕೋನರೆಡ್ಡಿ ಮತ ಚಲಾಯಿಸಿದರು.

Chaitra Kulal

Recent Posts

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

13 mins ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

40 mins ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

55 mins ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

1 hour ago

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

2 hours ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

2 hours ago