News Karnataka Kannada
Sunday, April 28 2024
ಹುಬ್ಬಳ್ಳಿ-ಧಾರವಾಡ

ಬಣ್ಣ ಬಿಟ್ಟು ಮಣ್ಣಿನಿಂದ ಹೋಳಿ ಆಚರಣೆ; ಮಾದರಿಯಾದ ನೂಲ್ವಿ ಜನರು

ಹೋಳಿ ಹಬ್ಬದ ಸಂಭ್ರಮ ಅಂದರೇ ತರ ತರಹದ ಬಣ್ಣಗಳನ್ನು ಹಚ್ಚಿಕೊಂಡು ಆಚರಣೆ ಮಾಡುವುದು ಸರ್ವೇ ಸಾಮಾನ್ಯ. ಆದರೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದಲ್ಲಿ ವಿಶೇಷವಾಗಿ ಪರಿಸರ ಸ್ನೇಹಿ ಹೋಳಿ ಹಬ್ಬ ಆಚರಣೆ ಮಾಡಲಾಗಿದೆ.
Photo Credit : NewsKarnataka

ಹುಬ್ಬಳ್ಳಿ: ಹೋಳಿ ಹಬ್ಬದ ಸಂಭ್ರಮ ಅಂದರೇ ತರ ತರಹದ ಬಣ್ಣಗಳನ್ನು ಹಚ್ಚಿಕೊಂಡು ಆಚರಣೆ ಮಾಡುವುದು ಸರ್ವೇ ಸಾಮಾನ್ಯ. ಆದರೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದಲ್ಲಿ ವಿಶೇಷವಾಗಿ ಪರಿಸರ ಸ್ನೇಹಿ ಹೋಳಿ ಹಬ್ಬ ಆಚರಣೆ ಮಾಡಲಾಗಿದೆ.

ರಂಗುರಂಗಿನ ಬಣ್ಣಗಳ ಬದಲಿಗೆ ಮಣ್ಣು ಹಚ್ಚಿಕೊಂಡು ಹೋಳಿ ಹಬ್ಬ ಆಚರಣೆ ಮಾಡಿದ್ದಾರೆ. ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಗ್ರಾಮದ ಯುವಕರು, ಸಾಮೂಹಿಕವಾಗಿ ಕಾಮ ದಹನ ಮಾಡಿ ಹೋಳಿ ಹಬ್ಬ ಆಚರಣೆ ಮಾಡಿದ್ದು, ರಾಸಾಯನಿಕ ಬಣ್ಣಗಳ ಬಳಕೆಗೆ ಬ್ರೇಕ್ ಹಾಕಿದ್ದಾರೆ. ಬಣ್ಣಗಳ ಬದಲಿಗೆ ಮಣ್ಣಿನೊಂದಿಗೆ ಹೋಳಿ ಹಬ್ಬ ಆಚರಣೆ ಮಾಡಿದ್ದಾರೆ.

ರಸಾಯನಿಕ ಬಣ್ಣಗಳಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಉಂಟಾಗುವ ಕಾರಣ ಅವುಗಳ ಬದಲಿಗೆ ಮಣ್ಣನ್ನು ಬಳಕೆ ಮಾಡಿದ್ದಾರೆ. ಸಂಪೂರ್ಣವಾಗಿ ಮಣ್ಣಿನಲ್ಲಿ ಮಿಂದೆದ್ದು, ಹೋಳಿ ಹಬ್ಬ ಆಚರಣೆ ಮಾಡಿದ್ದಾರೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ನಡೆದ ಮಣ್ಣಿನೊಂದಿಗೆ ಹೋಳಿ ಹಬ್ಬದ ಆಚರಣೆಯ ಮೂಲಕ ನೂಲ್ವಿ ಗ್ರಾಮದ ಯುವಕರು ಹೊಸ ಇತಿಹಾಸವನ್ನು ಬರೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು