ಹಳೆಯ ವಿದ್ಯಾರ್ಥಿಯಿಂದ ಕೆಎಲ್‌ಇ ಬಿವಿಬಿಗೆ ಒಂದು ಕೋಟಿ ದೇಣಿಗೆ ಚೆಕ್ ವಿತರಣೆ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಕೆಎಲ್‌ಇ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಲಿತು ಸಾಕಷ್ಟು ಸಾಧನೆ ಮಾಡಿರುವ ಹಳೆಯ ವಿದ್ಯಾರ್ಥಿಯೊಬ್ಬರು ತಾವು ಕಲಿತ ಶಿಕ್ಷಣ ಸಂಸ್ಥೆ ಹಾಗೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಭವಿಷ್ಯ ನಿಧಿಗೆ ತಮ್ಮ ತಂದೆಯ ಹೆಸರಿನಲ್ಲಿ ಒಂದು ಕೋಟಿ ರೂಪಾಯಿ ದೇಣಿಗೆ ನೀಡುವ ಮೂಲಕ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಬೆಳಕಾಗಿದ್ದಾರೆ.

ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಲಿತು ಕೈಗಾರಿಕೋದ್ಯಮಿ ಮತ್ತು ಸ್ಟಾರ್ ಉದ್ಯಮಿಯಾಗಿರುವ ಪ್ರದೀಪ್ ವಜ್ರಂ ತಮ್ಮ ತಂದೆ ಚಂದ್ರಶೇಖರ ವಜ್ರಂ ಹೆಸರಿನಲ್ಲಿ 1 ಕೋಟಿ ರೂಪಾಯಿಗಳ ದೇಣಿಗೆಯನ್ನು ನೀಡಿದ್ದಾರೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹಾಗೂ ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಹಾಯದ ಅಗತ್ಯವಿರುವವರ ಜೀವನದ ಮೇಲೆ ಪರಿವರ್ತನೆಯ ಪ್ರಭಾವವನ್ನು ಬೀರುವಂತೆ ಇಂತಹದೊಂದು ಉದಾರತೆಯ ದಾನವನ್ನು ಮಾಡಿದ್ದಾರೆ. ಇನ್ನೂ, ವಜ್ರಂ ಒಂದು ಕೋಟಿ ರೂ.ಗಳ ಚೆಕ್ ಅನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪ್ರೊ.ಬಿ.ಎಲ್.ದೇಸಾಯಿ, ಡಾ.ಬಿ.ಎಸ್.ಅನಾಮಿ, ಡಾ.ಪ್ರಕಾಶ್ ತಿವಾರಿ, ಅಶೋಕ್ ತೋಳಣ್ಣನವರ ಉಪಸ್ಥಿತಿಯಲ್ಲಿ ಕೆಎಲ್ ಇ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಅಶೋಕ್ ಶೆಟ್ಟರ್ ಅವರಿಗೆ ಒಂದು ಕೋಟಿ ರೂ. ಚೆಕ್ ವಿತರಣೆ ಮಾಡಲಾಯಿತು.

Ashika S

Recent Posts

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

10 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

16 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

27 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

37 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

47 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

53 mins ago