ಹುಬ್ಬಳ್ಳಿ: ವಿಮಾನ ನಿಲ್ದಾಣಕ್ಕೆ ಹೆಸರು ವಿಚಾರ – ಬಿಎಸ್ ವೈ‌ ಜೊತೆಗೆ ಚರ್ಚಿಸುತ್ತೇನೆಂದ ಸಿಎಂ

ಹುಬ್ಬಳ್ಳಿ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ನಾಮಕರಣ ಬೇಡ ಎಂದು ಮೊದಲಿನಿಂದಲೂ ಯಡಿಯೂರಪ್ಪನವರು ಅದನ್ನೇ ಹೇಳುತ್ತಿದ್ದಾರೆ. ಆದರೆ ಶಿವಮೊಗ್ಗದ ಜನ ಒತ್ತಡ ತಂದಿದ್ದಾರೆ. ಈ ಕುರಿತು ಬಿಎಸ್ ವೈ ಜೊತೆ ಮಾತನಾಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಹೆಸರಿಡುವ ಕುರಿತು ಚರ್ಚೆ ಮಾಡುತ್ತೇವೆ.

ಕಾಂಗ್ರೆಸ್ ದು ಟಿಪ್ಪು ಸುಲ್ತಾ ವಂಶಸ್ಥರ ಸಂಸ್ಕೃತಿ ನಮ್ಮದು ನಾಲ್ವಡಿ ಕೃಷ್ಣರಾಜರ ಸಂಸ್ಕೃತಿ ಎಂಬ ಸಿ.ಟಿ.ರವಿ ಹೇಳಿಕೆ ವಿಚಾರ ಪ್ರತಿಕ್ರಿಯಿಸಿ, ಯಾರ್ಯಾರದ್ದು ಯಾವ ಸಂಸ್ಕೃತಿ ಎಂಬುದು ಜನರಿಗೆ ಗೊತ್ತಿದೆ. ನನ್ನ ಪ್ರಕಾರ ನಮ್ಮದು ನರೇಂದ್ರ ಮೋದಿ ಸಂಸ್ಕೃತಿ. ಭಾರತವನ್ನ ಅತ್ಯಂತ ಸಶಕ್ತವಾಗಿ ಶ್ರೀಮಂತವಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಅವರು ಅಮೃತ ಕಾಲವನ್ನ ಕರ್ತವ್ಯ ಕಾಲ ಎಂದು ಹೇಳಿದ್ದಾರೆ. ಕರ್ತವ್ಯದ ಮೂಲಕ ದೇಶವನ್ನ ಇಡೀ ಜಗತ್ತಿಗೆ ಸರ್ವ ಶ್ರೇಷ್ಠವನ್ನಾಗಿಸಲು ಹೊರಟಿದ್ದಾರೆ. ಆ ಧ್ಯೇಯ ಇಟ್ಟುಕೊಂಡು ನಾವು ಆಡಳಿತ ಮಾಡುತ್ತಿದ್ದೇವೆ ಎಂದರು.

Ashika S

Recent Posts

ಅಮೇರಿಕಾದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ : ಕಾರಣ ಇಲ್ಲಿದೆ

ಅಮೇರಿಕಾದಲ್ಲಿ ಎಂಡಿಎಚ್​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…

14 mins ago

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

32 mins ago

ನಾಳೆ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ : ಇಂದು ರೋಡ್‌ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…

46 mins ago

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

2 hours ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

2 hours ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

2 hours ago