ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ

ಹುಬ್ಬಳ್ಳಿ: ಸಿದ್ಧರಾಮಯ್ಯ ತಾವೇ ಸುಳ್ಳಿನ ಸುಳಿಯಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ಸಿದ್ಧರಾಮಯ್ಯ ಹೇಳಿರುವ ಸುಳ್ಳು ಒಂದೊಂದಾಗಿ ಹೊರಬರುತ್ತಿದೆ. ಅವರು ಪ್ರಣಾಳಿಕೆಯಲ್ಲಿ ಘೋಷಿಸಿರುವ ಭರವಸೆಗಳ ಕುರಿತು ವಿಧಾನಸಭೆ ಅಧಿವೇಶನದಲ್ಲಿಯೇ ಹೇಳಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರು ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಆದರ್ಶನಗರದ ಸಿಎಂ ನಿವಾಸದ ಎದುರು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇನ್ನೊಬ್ಬರ ಬಗ್ಗೆ ಸಾವಿರ ಬಾರಿ ಸುಳ್ಳು ಹೇಳಿದರೇ ಅದು ಸತ್ಯವಾಗುತ್ತದೆ ಎನ್ನುವ ಭ್ರಮೆಯಲ್ಲಿ ಸಿದ್ದರಾಮಯ್ಯನವರು ಇದ್ದಾರೆ. ಸತ್ಯ ಸತ್ಯವೇ, ಸುಳ್ಳು ಸುಳ್ಳೆ ಅವರು ಹೇಳಿದ ತಕ್ಷಣ ಸುಳ್ಳು ಸತ್ಯವಾಗಲ್ಲ, ಸತ್ಯ ಸುಳ್ಳಾಗಲ್ಲ. ಆದರೆ ಅತಿಯಾದ ಸುಳ್ಳು ಹೇಳಿದ ಮೇಲೆ ಸುಳ್ಳೇ ಸತ್ಯ ಅಂತ ಅವರಿಗೆ ನಂಬಿಕೆ ಬರಲಾರಂಭಿಸಿದೆ. ಎಂದರು.

ಮಠಾಧೀಶರನ್ನು ಚುನಾವಣಾ ಅಖಾಡಕ್ಕೆ ಇಳಿಸುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದುವರೆಗೂ ಯಾವುದೇ ಮಠಾಧೀಶರು ನನ್ನನ್ನು ಸಂಪರ್ಕಿಸಿಲ್ಲ, ಚರ್ಚಿಸಿಲ್ಲ. ಮಠಾಧೀಶರು ಚುನಾವಣೆಗೆ ಇಳಿಯುತ್ತಾರೆ ಎನ್ನುವ ಬಗ್ಗೆ ಏನೂ ಹೇಳಿಲು ಆಗಲ್ಲ ಎಂದು ಅವರು ಹೇಳಿದರು.

ಸಿದ್ಧರಾಮಯ್ಯ ಅರ್ಕಾವತಿ ಹಗರಣ ಸಿಬಿಐ ತನಿಖೆಗೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಬಿಐ ತನಿಖೆ ಬಗ್ಗೆ ಯಾರು ಹೇಳಿದ್ದು ಎಂದು ಪ್ರಶ್ನಿಸಿದ ಅವರು,ಅರ್ಕಾವತಿ ಹಗರಣದ ಬಗ್ಗೆ ಕಮೀಷನ್ ವರದಿ ಕೊಟ್ಟಿದೆ.

ಮುಂದೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ. ನಾವು ಸಂಪುಟದಲ್ಲಿ ಚರ್ಚಿಸಿ ಮುಂದಿನ ನಿರ್ಧಾನ ಕೈಗೊಳ್ಳುತ್ತೇವೆ ಎಂದು ಅವರು ಮಾಹಿತಿ ನೀಡಿದರು.

ಸೋನಿಯಾಗಾಂಧಿ ರಾಜಕೀಯ ನಿವೃತ್ತಿ ವಿಚಾರವಾಗಿ ಮಾತನಾಡಿದ ಅವರು, ಅದು ಅವರ ವೈಯಕ್ತಿಕ ಈ ಬಗ್ಗೆ ಮಾತನಾಡಲ್ಲ. 7ನೇ ವೇತನ ಆಯೋಗ ಜಾರಿಗಾಗಿ ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಿಚಾರದ ಬಗ್ಗೆ ಮಾತನಾಡಿದ ಅವರು, ನಾನು ಈಗಾಗಲೇ ಅವರ ಜೊತೆ ಚರ್ಚಿಸಿದ್ದೇನೆ. ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದರು

ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ವಿಚಾರವಾಗಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಸಕ್ರಿಯ ರಾಜಕಾರಣದಿಂದ ದೂರವಾಗಲ್ಲ. ಈ ಬಗ್ಗೆ ಅವರೇ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ಯನ್ನು ಅವರು ಮತ್ತಷ್ಟು ಬಲಪಡಿಸುತ್ತಾರೆ ಎಂದು ಹುಬ್ಬಳ್ಳಿಯಲ್ಲಿ ಬಸವರಾಜ ಬೊಮ್ಮಾಯಿ ಹೇಳಿದರು.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago