ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಬಹಿರಂಗವಾಗಿ ಕ್ಷಮೆಯಾಚನೆ ಮಾಡಬೇಕು – ಅಶ್ವಥ್ ನಾರಾಯಣ

ಹುಬ್ಬಳ್ಳಿ: ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಶಾಸಕರು ಕಮಿಷನ್ ಪಡೆಯುವುದು ಬಹಿರಂಗಗೊಂಡಿದ್ದು, ಕೂಡಲೇ ಕಾಂಗ್ರೆಸ್ ಪಕ್ಷದ ನಾಯಕರು ಈ ಬಗ್ಗೆ ಮಾತನಾಡಬೇಕು. ಬಹಿರಂಗವಾಗಿ ಕ್ಷಮೆಯಾಚನೆ ಮಾಡಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ ಒತ್ತಾಯಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್’ನವರು 40% ಕಮಿಷನ್ ಕುರಿತಾಗಿ ಬೀದಿ ಬೀದಿಗಳಲ್ಲಿ ಸುಳ್ಳು ಆರೋಪ ಮಾಡಿದ್ದಾರೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದರು. ಇದೀಗ ಕಾಂಗ್ರೆಸ್ ಪಕ್ಷದ ಬಹುತೇಕ ಶಾಸಕರುಗಳ ಮೇಲೆ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕಮಿಷನ್ ಪಡೆದಿರುವುದು ಜಗಜ್ಜಾಹೀರಾಗಿದೆ. ಹೀಗಿದ್ದಾಗ್ಯೂ ಈವರೆಗೆ ಕಾಂಗ್ರೆಸ್ ನಾಯಕರು ಚಕಾರ್ ಎತ್ತುತ್ತಿಲ್ಲ. ಕೂಡಲೇ ಕಾಂಗ್ರೆಸ್ ನಾಯಕರು ಸಾರ್ವಜನಿಕವಾಗಿ ಈ ಬಗ್ಗೆ ಕ್ಷಮಾಪಣೆ ಕೇಳಬೇಕೆಂದರು. ಮುಂದೆ ಬಂದು ಬಹಿರಂಗ ಕ್ಷಮೆ ಯಾಚಿಸಬೇಕು.

ಈಗಾಗಲೇ ಕಾಂಗ್ರೆಸ್ ಪಕ್ಷ ಚುನಾವಣೆ ಸಮೀಪಿಸುತ್ತಿದ್ದಂತೆ ಸುಳ್ಳು ಆಶ್ವಾಸನೆ ನೀಡುತ್ತಾ, ಗ್ಯಾರಂಟಿ ಕಾರ್ಡ್ ಮೂಲಕ ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದೆ. ಆದರೆ ಅದೇ ಬಿಜೆಪಿ ಏನೂ ಹೇಳದೆ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ರಸ್ತೆ ರಸ್ತೆಗಳಲ್ಲಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಆಡಳಿತವನ್ನು ಆಧಾರ ರಹಿತವಾಗಿ ಆರೋಪ ಮಾಡಿದ್ದಾರೆ. ಈ ಬಗ್ಗೆ ದಾಖಲೆಗಳನ್ನು ಈವರೆಗೆ ನೀಡಿಲ್ಲ. ಈ ದಿಸೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಆಗಿದೆ ಎಂದು ಹರಿಹಾಯ್ದರು.

ಇನ್ನು ಧಾರವಾಡ ಜಿಲ್ಲೆಯ 7 ವಿಧಾನಸಭಾ ಮತಕ್ಷೇತ್ರದ ಟಿಕೆಟ್ ವಿಚಾರವಾಗಿ ಪಕ್ಷದ ಪದಾಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹ ಸಭೆ ಕರೆಯಲಾಗಿದ್ದು, ಇವುಗಳನ್ನು ಪಕ್ಷದ ಹೈಕಮಾಂಡ್ ಗೆ ಕಳಿಸಲಾಗುವುದು. ಅಂತಿಮವಾಗಿ ಹೈಕಮಾಂಡ್ ಪಕ್ಷದ ಅಭ್ಯರ್ಥಿಗಳನ್ನು ಪಟ್ಟಿ ಬಿಡುಗಡೆ ಮಾಡಲಿದೆ ಎಂದು ತಿಳಿಸಿದರು.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago