ಧೂಳು ಮಯವಾದ ಹುಬ್ಬಳ್ಳಿ : ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು

ಹುಬ್ಬಳ್ಳಿ: ಹತ್ತಾರು ತಿಂಗಳುಗಳಿಂದ ನಡೆಯುತ್ತಿರುವ ರಸ್ತೆ ಕಾಮಗಾರಿಗಳು. ರಸ್ತೆಯೂ ಮುಗಿಯುತ್ತಿಲ್ಲ, ಅಭಿವೃದ್ಧಿಯೂ ಆಗ್ತಿಲ್ಲ. ಈ ನಿಟ್ಟಿನಲ್ಲಿ ಹಗಲು – ರಾತ್ರಿ ಧೂಳಿನ ದರ್ಶನವಾಗಿದ್ದು, ಪರಿಸರ ಮಾಲಿನ್ಯದಿಂದ ಕಂಗೆಟ್ಟ ಜನರು ಆಕ್ರೋಶಗೊಂಡಿರುವ ಘಟನರೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಕಾಮಗಾರಿ ವಿಚಾರದಲ್ಲಿ ಸ್ಮಾರ್ಟ್ ಸಿಟಿ-ಪಾಲಿಕೆ ನಡುವೆ ಕೆಸರೆರಚಾಟ ಜೋರಾಗಿದ್ದು, ಇದರಿಂದ ಸಾರ್ವಜನಿಕರಿಗೆ ಪ್ರಾಣ ಸಂಕಟ ಹೆಚ್ಚಾಗಿದೆ. ಧೂಳಿನ ಹೊಡೆತಕ್ಕೆ ವ್ಯಾಪಾರ ವಹಿವಾಟಿನ ಮೇಲೂ ಪರಿಣಾಮ ಬೀರಿದೆ.

ವಿವಿಐಪಿಗಳು ವಾಸಿಸುವ ಪ್ರದೇಶದಲ್ಲಿಯೂ ಇದೇ ಗತಿ. ಆದರ್ಶ ನಗರ, ವಿಜಯ ನಗರ, ವಿಶ್ವೇಶ್ವರ ನಗರದಲ್ಲಿ ಎರಡು ವರ್ಷಗಳಿಂದಲೂ ಕಾಮಗಾರಿ ನಡೆದಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಂಸದ ಐಜಿ ಸನದಿ ಸೇರಿ ಹಲವು ನಾಯಕರಿರೋ ಪ್ರದೇಶದಲ್ಲಿ ಯುಜಿಡಿ ಪೈಪ್ ಲೈನ್ ಹಾಕಿ ಹಾಗೆಯೇ ಬಿಟ್ಟಿದ್ದಾರೆ. ಭಾರೀ ವಾಹನಗಳು ಸಂಚರಿಸುತ್ತಿದ್ದಂತೆಯೇ ಎದ್ದೇಳುವ ಧೂಳು, ಮನೆ, ಅಂಗಡಿ ಮಳಿಗೆ ಇತ್ಯಾದಿಗಳ ಮೇಲೆ ಮಣ್ಣು ಬಂದು ವ್ಯವಸ್ಥೆಯೇ ಹಾಳಾಗುವಂತೆ ಮಾಡಿದೆ. ಸಾರ್ವಜನಿಕರ ಆರೋಗ್ಯದ ಮೇಲೂ ಪ್ರತಿಕೂಲ ಪರಿಣಾಮ ಬೀರಿದ್ದು, ಅಧಿಕಾರಿಗಳ ಕಾರ್ಯವೈಖರಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಕೂಡಲೇ ರಸ್ತೆ ಕಾಮಗಾರಿ ಕೈಗೊಳ್ಳುವಂತೆ ಜನರು ಆಗ್ರಹಿಸಿದ್ದಾರೆ. ಧೂಳಿನಿಂದ ಮುಕ್ತಿ ನೀಡುವಂತೆ ಜನತೆಯ ಒತ್ತಾಯ ಕೇಳಿ ಬಂದಿದ್ದು,ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡೋ ಎಚ್ಚರಿಕೆ ನೀಡಿದ್ದಾರೆ.

Ashika S

Recent Posts

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

14 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

22 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

37 mins ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

37 mins ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

1 hour ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

1 hour ago