News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ರೈತರ ಮಕ್ಕಳ ಮದುವೆಯಾಗೋ ಹೆಣ್ಮಕ್ಕಳಿಗೆ ಸರ್ಕಾರಿ ಕೆಲಸ – ರೈತ ಪ್ರಣಾಳಿಕೆಯಲ್ಲಿ ಘೋಷಣೆ

Govt jobs for daughters who marry farmers' children: Farmers' manifesto
Photo Credit : News Kannada

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರವನ್ನ ನಡೆಸುತ್ತಿವೆ. ಈ ನಡುವೆ ಚುನಾವಣೆಯಲ್ಲಿ ರೈತರ ಪ್ರಣಾಳಿಕೆಯನ್ನು ಬಹಿರಂಗವಾಗಿ ಒಪ್ಪುವ ಪಕ್ಷಗಳಿಗೆ ರೈತರ ಬೆಂಬಲ ನೀಡಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಹೇಳಿದ್ದಾರೆ.

ನಗರದಲ್ಲಿ ಪ್ರಸಕ್ತ ವಿಧಾನಸಭಾ ಚುನಾವಣೆಗೆ ರೈತರ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ರೈತರ ಮಕ್ಕಳ ಮದುವೆಯಾಗುವ ಹೆಣ್ಣು ಮಕ್ಕಳಿಗೆ ಸರ್ಕಾರಿ ಕೆಲಸ ನೀಡಬೇಕು ಎನ್ನುವ ಬೇಡಿಕೆಯನ್ನು ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ. ಸರ್ಕಾರಿ ನೌಕರರಿಗೆ, ಎಂಎಲ್ಎಗಳು ಮಂತ್ರಿಗಳಿಗೆ ಎಲ್ಲ ವರ್ಗದವರಿಗೂ ಪ್ರತಿ ತಿಂಗಳು ಸಂಬಳ ರೂಪದಲ್ಲಿ ಕನಿಷ್ಠ ಆದಾಯ ಬರುತ್ತದೆ, ಅದೇ ರೀತಿ ದಿನದಲ್ಲಿ ಕನಿಷ್ಠ 12 ಗಂಟೆ ದುಡಿಯುವ ರೈತರಿಗೆ ಕನಿಷ್ಠ ಆದಾಯ ಖಾತರಿ ಭದ್ರತೆ ಯೋಜನೆ ಜಾರಿಗೆ ಬರಬೇಕು ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಆಗ್ರಹಿಸಿದರು.

ಪ್ರಾಣಿಗಳ ಹಾವಳಿ, ಹಾಗೂ ದಾಳಿಯಿಂದ ರೈತನ ಬದುಕು ಹಾಳಾಗುತ್ತಿದೆ ಆದಕಾರಣ ಹಗಲು ವೇಳೆಯಲ್ಲಿ ಕೃಷಿ ಪಂಪಸೆಟ್‌ ಗಳಿಗೆ 12 ಗಂಟೆಗಳ ನಿರಂತರ ವಿದ್ಯುತ್ ನೀಡುವ ಭರವಸೆ ಬೇಕು. ದೇಶದ ಉದ್ಯಮಿಗಳಿಗೆ 10 ಲಕ್ಷ ಕೋಟಿ ಸಾಲ ಮನ್ನ ಮಾಡಿದ ರೀತಿಯಲ್ಲಿಯೇ ಅತಿವೃಷ್ಟಿ ಹಾನಿ ಕರೋನ ಸಂಕಷ್ಟದಿಂದ ತತ್ತರಿಸಿರುವ ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಆಗಬೇಕು , ಕೃಷಿ ಸಾಲ ನೀತಿ ಬದಲಾಗಬೇಕು ಎಂದ ಅವರು ದೇಶದ 135 ಕೋಟಿ ಜನರಿಗೆ ಆಹಾರ ಉತ್ಪಾದನೆ ಮಾಡುವ ರೈತನಿಗೆ ಬಡ್ಡಿ ರಹಿತವಾಗಿ ಕೃಷಿ ಸಾಲ ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ನೀಡುವಂತಾ ಯೋಜನೆ ಜಾರಿಗೆ ಬರಬೇಕು. ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಪರಿಗಣನೆ ಕೈ ಬಿಡುವುದಾಗಿ ಭರವಸೆ ನೀಡಬೇಕು, ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ನೀಡುವ ಶಾಸನ ಜಾರಿ, ಡಾ. ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು.

ಫಸಲ್ ಭೀಮಾ ಬೆಳೆ ವಿಮೆ ಯೋಜನೆ ತಿದ್ದುಪಡಿ ಮಾಡಬೇಕು, ಎಲ್ಲಾ ಬೆಳೆಗಳಿಗೂ ಬೆಳೆ ವಿಮೆ ಅನ್ವಯ ಮಾಡಬೇಕು. ಅಲ್ಲದೇ ಅಭಿವೃದ್ಧಿ ಹೆಸರಿನಲ್ಲಿ ರೈತರ ಕೃಷಿ ಭೂಮಿ ಭೂಸ್ವಾದಿನ ಪ್ರಕ್ರಿಯೆ ನಿಲ್ಲಿಸಬೇಕು, ಅಗತ್ಯ ಸಂದರ್ಭಗಳಲ್ಲಿ ರೈತರ ಅನುಮತಿ ಪಡೆಯಬೇಕು ಆಂತಹ ರೈತರಿಗೆ ಜೀವನ ಭದ್ರತೆ ರೂಪಿಸಬೇಕು ಎಂದು ಹೇಳಿದ್ದಾರೆ.

ಕಬ್ಬು ಕಟಾವು ಸಾಗಾಣಿಕೆ ದುಬಾರಿ ವೆಚ್ಚ, ಹಾಗೂ ರೈತರ ಸುಲಿಗೆ ತಪ್ಪಿಸಲು ಕಬ್ಬಿನ ಎಪ್ ಆರ್ ಪಿ ಧರ ರೈತರ ಹೊಲದಲ್ಲಿನ ಧರ ಎಂದು ನಿಗದಿ ಪಡಿಸಬೇಕು. ರೈತರು ಆಲೆಮನೆಗಳಲ್ಲಿ ಕಬ್ಬಿನಿಂದ ಎಥನಾಲ್ ಉತ್ಪಾದನೆಗೆ , ಟ್ಯಾಕ್ಟರ್ ಮತ್ತಿತರ ಯಂತ್ರಗಳಿಗೆ ಬಳಸಿಕೊಳ್ಳಲು ರೈತರಿಗೆ ಅವಕಾಶ ನೀಡಬೇಕು. ಬಾಳೆ ಬೆಳೆಯನ್ನು ಸೇರಿಸುವ ರೀತಿಯಲ್ಲಿ ಕಬ್ಬು ಬೆಳೆಯ ಉತ್ಪಾದನೆಗೆ ಎನ್ಆರ್‌ಇಜಿ ಯೋಜನೆಯನ್ನು ಸೇರಿಸಬೇಕು ಎಂದರು.

ಗ್ರಾಮೀಣ ಯುವಕರನ್ನು ವಲಸೆ ತಪ್ಪಿಸಿ ಕೃಷಿಯಲ್ಲಿ ತೊಡಗಿಸಿ ಕೊಳ್ಳಲು, ಗ್ರಾಮೀಣ ಭಾಗದಲ್ಲಿ ಕೃಷಿ ಪೂರಕ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಭರವಸೆ ಬೇಕು. ಕೃಷಿ ಉತ್ಪನ್ನ, ಹಾಗೂ ಕೃಷಿ ಉಪಕರಣಗಳ ಮೇಲೆ ವಿಧಿಸಿರುವ ಜಿಎಸ್‌ಟಿ ರದ್ದುಗೊಳಿಸಬೇಕು ಸಾವಯವ ಉತ್ಪನ್ನಗಳು, ಸಿರಿಧಾನ್ಯಗಳಿಗೆ ಪ್ರತ್ಯೇಕ ಮಾರುಕಟ್ಟೆ , ಪ್ರತ್ಯೇಕ ಹೆಚ್ಚುವರಿ ಧರ ನಿಗದಿ ಯೋಜನೆ ಜಾರಿಗೆ ಬರಬೇಕು. ವಿದೇಶಿ ಬಹುರಾಷ್ಟ್ರೀಯ ಎಫ್ ಡಿಐ ಬಂಡವಾಳಶಾಹಿ ಕಂಪನಿಗಳು ಚಿಲ್ಲರೆ ಮಾರಾಟ ವ್ಯವಸ್ಥೆಗೆ ಕಡಿವಾಣ ಹಾಕಬೇಕು, ಕೃಷಿ ಕ್ಷೇತ್ರದಲ್ಲಿ ಹೂಡಿಕೆ ನಿಷೇಧವೆ ರಬೇಕು, ರಾಜ್ಯದ ಕಬ್ಬು ಬೆಳೆಗಾರರಿಗೆ ವಂಚನೆ ಎಸೆಗುತ್ತಿರುವ ಕಾನೂನುಗಳನ್ನ ಉಲ್ಲಂಘನೆ ಮಾಡುತ್ತಿರುವ ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕುಟುಂಬಸ್ಥರನ್ನು ಸಚಿವ ಸಂಪುಟಕ್ಕೆ ಸೇರಿಸಿ ಕೊಳ್ಳಬಾರದು ಎಂದು ಹೇಳಿದರು.

ರಾಜ್ಯದಲ್ಲಿ ಜಾರಿಗೆ ತಂದಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವ ಭರವಸೆ ನೀಡಬೇಕು. ಕಬ್ಬಿನ ಹೆಚ್ಚುವರಿ ದರ 150 ರೂ ನಿಗದಿ ಆಧೇಶ ತಡೆಯಾಗ್ನೇ ತೆರವುಗೊಳಿಸಲು ರಾಜ್ಯ ಸರ್ಕಾರದ ತಕ್ಷಣ ಕ್ರಮ ಕೈಗೊಳ್ಳಬೇಕು , ರಾಜ್ಯ ಸರ್ಕಾರ ಇಬ್ಬಗೆ ನೀತಿ ಅನುಸರಣೆ ಮಾಡದೆ ರೈತರಿಗೆ ಕಾರ್ಖಾನೆಗಳಿಂದ ಹೆಚ್ಚುವರಿ ಹಣ ಕೂಡಿಸಬೇಕು, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಲಿ, ನಿರ್ಲಕ್ಷ್ಯ ಮಾಡಿದರೆ ಬಿಜೆಪಿ ಮಂತ್ರಿಗಳು ಹಳ್ಳಿಗಳಿಗೆ ಬಂದಾಗ ಘೇರಾವ್ ಕಾರ್ಯಕ್ರಮ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ರೈತರ ಪ್ರಣಾಳಿಕೆಯನ್ನು ರಾಜ್ಯದಲ್ಲಿರುವ ಪ್ರಬಲ ಯಾವುದೆ ಪಕ್ಷ ಬಹಿರಂಗ ಒಪ್ಪಿಗೆ ಸೂಚಿಸಿ ಜಾರಿಗೆ ತರಲು ಭರವಸೆ ನೀಡುತ್ತಾರೆ,ಆಂತಹ ಪಕ್ಷ ಬಹಿರಂಗವಾಗಿ ಬೆಂಬಲಿಸಲು ಕರೆ ನೀಡಲಾಗುವುದು ಎಂದು ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ರಾಜ್ಯ ಕಾರ್ಯಧ್ಯಕ್ಷ ವೀರನಗೌಡ ಪಾಟೀಲ್, ಉಪಾಧ್ಯಕ್ಷ ಸುರೇಶ್ ಮ ಪಾಟೀಲ್, ರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಶುರಾಮ್ ಎತ್ತಿನಗುಡ್ಡ, ಜಿಲ್ಲಾ ಉಪಾಧ್ಯಕ್ಷ ಉಳುವಪ್ಪ ಬಳಗೇರಿ, ತಾಲೂಕು ಅಧ್ಯಕ್ಷ ವಾಸು ಡಾಕಪ್ಪ, ಉಪಾಧ್ಯಕ್ಷ ಬಸವನಗೌಡ ಪಾಟೀಲ್ ಮುಂತಾದವರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು