ಹುಬ್ಬಳ್ಳಿ: ಶೆಟ್ಟರ್ ಗೆ ಟಿಕೆಟ್ ದೊರೆಯುವ ವಿಶ್ವಾಸ ವಿದೆ- ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಗೆ ಟಿಕೆಟ್ ಸಿಗತ್ತೆ ಅನ್ನೋ ವಿಶ್ವಾಸ ಇದೆ. ನಾನು ಹಾಗೂ ಶೆಟ್ಟರ್ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಮಾತನಾಡಿದ್ದೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ನಗರದಲ್ಲಿಂದು ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಶೆಟ್ಟರ್ ಗೆ ಟಿಕೆಟ್ ಸಿಗತ್ತೆ ಅನ್ನೋ ನೀರಿಕ್ಷೆ ಇದೆ. ನಮ್ಮ ಅಭಿಪ್ರಾಯ ಹೇಳಿದ್ದೇವೆ. ಎಲ್ಲವೂ ಸುಲಲಿತವಾಗಿ ಪರಿಹಾರ ಆಗತ್ತೆ ಎಂಬ ವಿಶ್ವಾಸವಿದೆ ಎಂದರು.

ಭಾರತೀಯ ಜನತಾ ಪಾರ್ಟಿಯಲ್ಲಿ 52 ಜನ ಹೊಸ ಮುಖಕ್ಕೆ ಕೊಡಲಾಗಿದೆ. ಕಾಂಗ್ರೆಸ್ ನಂತೆ ವಂಶಕ್ಕೆ ಟಿಕೆಟ್ ಕೊಡಲ್ಲ. ಅಪ್ಪ‌ಮಕ್ಕಳಿಗೆ ಟಿಕೆಟ್ ಕೊಡಲ್ಲ. ಸವದಿ ಕಾಂಗ್ರೆಸ್ ಗೆ ಹೋಗಬಾರದು ಅನ್ನೋದು ನಮ್ಮ ಅಪೇಕ್ಷೆ ಇದೆ. ಸವದಿ ಅವರಿಗೆ ನಮ್ಮ ಪಾರ್ಟಿ ಎಲ್ಲವನ್ನು ಕೊಟ್ಟಿದೆ. ಕಾಂಗ್ರೆಸ್ ಯುಸ್ ಆ್ಯಂಡ್ ಥ್ರೋ ಪಾರ್ಟಿ. ಸವದಿ ಅವರನ್ನ ನಮ್ಮ ಪಾರ್ಟಿ ಉಪಮುಖ್ಯಮಂತ್ರಿ ಮಾಡಿದ್ದೇವೆ. ಇಲ್ಲಿ ಅವರಿಗೆ ಉತ್ತಮ ಭವಿಷ್ಯ ಇತ್ತು. ದಯವಿಟ್ಟು ಅಲ್ಲಿಗೆ ಹೋಗುವದು ಬೇಡ ಎಂದರು.

ಬಿಜೆಪಿಯಲ್ಲಿ ಟಿಕೆಟ್ ಬಹಳ ರಶ್ ಇತ್ತು. ಹಾಗಾಗಿ ಕೆಲ ಕಡೆ ಗೊಂದಲ ಆಗಿದೆ.ಯಾವ ಪಾರ್ಟಿ ಗೆಲ್ಲುತ್ತೆ, ಅಲ್ಲಿ ಆಕಾಂಕ್ಷಿಗಳು ಜಾಸ್ತಿ ಇರುತ್ತಾರೆ. 90 ಪರ್ಸೆಂಟ್ ಸಮಸ್ಯೆ ಬಗೆಹರಿಯುತ್ತೆ. ಇಂದು ನಾಳೆ ಸಮಸ್ಯೆ ಬಗೆಹರಿಯುತ್ತೆ. ಭಾರತೀಯ ಜನತಾ ಪಾರ್ಟಿ ಎಮೋಷನಲ್ ಕಾರ್ಯಕರ್ತರು ನಮ್ಮ ಜೊತೆ ಇರ್ತಾರೆ ಎಂದರು.

ಕಾಂಗ್ರೆಸ್ ಕಾಲದಲ್ಲಿ ಸಂವಿಧಾನ ಶಿಲ್ಪಿಗೆ ಸಿಗಬೇಕಾದ ಗೌರವ ದೊರಕಿಲ್ಲಾ- ಪ್ರಲ್ಹಾದ ಜೋಶಿ
ಹುಬ್ಬಳ್ಳಿ : ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಸಿಕಬೇಕಾದ ಪ್ರಾಶಸ್ತ್ಯ ಹಿಂದಿನ ಕಾಂಗ್ರೆಸ್ ಕಾಲದಲ್ಲಿ ಸಿಕರಲಿಲ್ಲಾ. ಈಗ ನಾವು ಪಂಚತೀರ್ಥಗಳನ್ನು ಅಭಿವೃದ್ಧಿ ಯನ್ನು ಮಾಡಿದ್ದೇವೆ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹುಟ್ಟಿದ ಸ್ಥಳ ,ಅಧ್ಯಯನ ಸ್ಥಳ ಅಭಿವೃದ್ಧಿ ಮಾಡಿದ್ದೇವೆ. ಅವರಿಗೆ ಗೌರವ ಕೊಡೋ‌ ಕೆಲಸ ನಮ್ಮ ಸರ್ಕಾರ ಮಾಡಿದೆ. ನಾಡಿನ ಜನತೆಗೆ ಅಂಬೇಡ್ಕರ್ ಜಯಂತಿಯ ಶುಭಾಶಯ ತಿಳಿಸಿದರು.

ನಗರದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ದೇಶದಲ್ಲಿ ಉತ್ತಮ ಸರ್ಕಾರ ಇದೆ. ಮೋದಿ ಪ್ರಧಾನಿ ಆಗಲಿಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಕಾರಣ.‌ ಪ್ರಧಾನಿ ಮೋದಿ ಅವರು ಹೇಳಿದ್ದರು. ನನ್ನಂತಹ ಬಡ ಕುಟುಂಬದಿಂದ ಬಂದತಂಹ ಅವರು ದೇಶದ ಪ್ರದಾನಿ‌ಮಂತ್ರಿ ಆಗುತ್ತಾರೆ ಅಂದ್ರೆ ಅದಕ್ಕೆ ಅಂಬೇಡ್ಕರ್ ಕಾರಣ ಅಂತ ಹೇಳಿದ್ದರು. ರಾಜಕಾರಣದಲ್ಲಿ ಸಮಾನತೆ, ಪ್ರಮಾಣಿಕ‌ಮಂತ್ರ ಅವರಿಗೆ ಸಲ್ಲಿಸುವ ಗೌರವ ಎಂದರು.

Gayathri SG

Recent Posts

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

47 seconds ago

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

23 mins ago

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

35 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

44 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

55 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

1 hour ago