News Karnataka Kannada
Thursday, May 02 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಕೈ ವಲಸಿಗರಿಂದ ಬಿಜೆಪಿಯಲ್ಲಿ ಅಶಿಸ್ತು – ಕೆಎಸ್‌ ಈಶ್ವರಪ್ಪ

Indiscipline in BJP due to hand migrants: Eshwarappa
Photo Credit : News Kannada

ಹುಬ್ಬಳ್ಳಿ: ವಿಧಾನಸಭೆ ಚುನಾವಣೆ ಹೀನಾಯ ಸೋಲಿನ ಬಳಿಕ ಬಿಜೆಪಿ ನಾಯಕರಲ್ಲಿ ನಿರಾಸೆ, ವಿವಾದಿತ ಹೇಳಿಕೆಗಳು ದಿನಕ್ಕೊಂದರಂತೆ ಹೊರಬರುತ್ತಿವೆ. ಈಗ ಈಶ್ವರಪ್ಪ ಈ ನಿಟ್ಟಿನಲ್ಲಿ ಮತ್ತೊಂದು ಹೇಳಿಕೆ ನೀಡಿದ್ದಾರೆ.

ಬಿಜೆಪಿಯಲ್ಲಿ ಸದ್ಯ ಅಶಿಸ್ತು ಮೂಡಿದೆ, ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸಿಗರು ಬಂದ ನಂತರ ಪಕ್ಷದಲ್ಲಿ ಅಲ್ಪಸ್ವಲ್ಪ ಅಶಿಸ್ತು ಮೂಡಿದ್ದು, ಅಶಿಸ್ತು ತೋರುವವರ ಬಾಲವನ್ನು ಕಟ್‌ ಮಾಡುತ್ತೇವೆ ಎಂದು ಎಂದು ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಆಪರೇಷನ್ ಕಮಲ ಮುಳುವಾಯ್ತು. ಕಾಂಗ್ರೆಸ್ ನಾಯಕರನ್ನು ಪಕ್ಷಕ್ಕೆ ಕರೆದುಕೊಂಡು ಬಂದಿರುವುದಕ್ಕೆ ಸಮಸ್ಯೆ ಅನುಭವಿಸುತ್ತಿದ್ದೇವೆ ಎಂದು ಹೇಳುವ ಮೂಲಕ ಆಪರೇಷನ್ ಕಮಲದ ವಿರುದ್ಧ ಗರಂ ಆದರು.

ಬಿಜೆಪಿ ಪಕ್ಷದಲ್ಲಿ, ಅಲ್ಲಲ್ಲಿ ಶಿಸ್ತು ಕಳೆದು ಹೋಗಿದೆ. ಕಾಂಗ್ರೆಸ್​ನ‌ ಗಾಳಿ ಸೋಕಿರುವುದೇ ಇದಕ್ಕೆ ಕಾರಣ. ಬಹಿರಂಗವಾಗಿ ಅಡ್ಜೆಸ್ಟ್​ಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗುತ್ತಿರುವುದು ದುರ್ದೈವ. ಇಂತಹದ್ದೆನ್ನಲ್ಲ ನಾಲ್ಕು ಗೋಡೆ ಮಧ್ಯೆ ಕೂತು ಮಾತನಾಡಬೇಕು. ಬಹಿರಂಗ ಹೇಳಿಕೆ ಕೊಡುವ ಬಗ್ಗೆ ಪಕ್ಷದ ನಾಯಕರೊಂದಿಗೆ ನಾನು ಮಾತನಾಡುತ್ತೇನೆ’ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು