News Karnataka Kannada
Sunday, April 28 2024
ಹುಬ್ಬಳ್ಳಿ-ಧಾರವಾಡ

ನರ್ಸ್​​ಗಳನ್ನು ಗುರಿಯಾಗಿಸಿಕೊಂಡು ರೀಲ್ಸ್: ಕಿಮ್ಸ್​ನ 11 ಎಂಬಿಬಿಎಸ್​​ ವಿದ್ಯಾರ್ಥಿಗಳು ಅಮಾನತು

hubballi kims
Photo Credit : News Kannada

ಹುಬ್ಬಳ್ಳಿ: ​​​ನರ್ಸ್​ಗಳ ಬಗ್ಗೆ ಅವಹೇನಕಾರಿಯಾಗಿ ರೀಲ್ಸ್ ಮಾಡಿದ್ದ ಹುಬ್ಬಳ್ಳಿಯ ಕಿಮ್ಸ್​​ನ 11 ಎಂಬಿಬಿಎಸ್​ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಂದು ವಾರದ ಮಟ್ಟಿಗೆ ಅಮಾನತು ಮಾಡಿ ಪ್ರಾಂಶುಪಾಲ ಡಾ.ಈಶ್ವರ ಹೊಸಮನಿ ಆದೇಶ ಹೊರಡಿಸಿದ್ದಾರೆ.

ವಿದ್ಯಾರ್ಥಿಗಳ ರೀಲ್ಸ್​ ವೈರಲ್​ ಆಗುತ್ತುದ್ದಂತೆ ಆಕ್ರೋಶಗೊಂಡಿದ್ದ ಕಿಮ್ಸ್​​ ನರ್ಸ್​​ಗಳು ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಹೀಗಾಗಿ ಒಂದು ವಾರಗಳ ಕಾಲ ಅಮಾನತು ಮಾಡಲಾಗಿದೆ. ರೀಲ್ಸ್ ಮಾಡಿದ್ದು ಮನರಂಜನೆಗೆ. ಆದರೂ ನಾವು ನರ್ಸ್​ಗಳ ಬಳಿ ಕ್ಷಮೆ ಕೇಳುತ್ತೇವೆ ಎಂದು ವಿದ್ಯಾರ್ಥಿಗಳು ವಿಡಿಯೋ ಮೂಲಕ ಕ್ಷಮೆ ಕೇಳಿದ್ದಾರೆ.

ಯಾವುದೇ ಅನುಮತಿ ಪಡೆಯದೆ ಕಿಮ್ಸ್ ಆಸ್ಪತ್ರೆ ಒಳಗಡೆ ನಟ ಪ್ರಜ್ವಲ್ ದೇವರಾಜ್ ಅಭಿನಯದ ಭದ್ರ ಚಿತ್ರದ “ನಂಬೆಡ ನಂಬೆಡ ಹುಡುಗಿರನ್ನು ನಂಬೇಡ” ಅನ್ನೋ ಹಾಡಿಗೆ ವಿದ್ಯಾರ್ಥಿಗಳು ರೀಲ್ಸ್​ ಮಾಡಿದ್ದಾರೆ. ಈ ಹಾಡಿನ ಮಧ್ಯೆ ಬರುವ “ನಂಬೆಡ ನಂಬೆಡ ನರ್ಸ್​​ಗಳನ್ನು ನಂಬೇಡ” ಸಾಲಿಗೆ ನೃತ್ಯ ಮಾಡಿದ್ದಾರೆ. ಈ ವಿಡಿಯೋವನ್ನು ಮಹೇಶ್ ರೆಡ್ಡಿ ಎಂಬುವ ವಿದ್ಯಾರ್ಥಿಯ ಅಕೌಂಟ್​ನಿಂದ ಪೋಸ್ಟ್​ ಮಾಡಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು