ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಕಾಮಣ್ಣ ಪ್ರತಿಷ್ಠಾಪನೆಗೆ ಪಾಲಿಕೆ ಅನುಮತಿ

ಹುಬ್ಬಳಿ: ಹುಬ್ಬಳ್ಳಿಯ ರಾಣಿ ಚನ್ನಮ್ಮ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನೀಡಿದ ಬೆನ್ನಲ್ಲೇ, ಈಗ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೂ ಸಹ ಮಹಾನಗರ ಪಾಲಿಕೆ ಅವಕಾಶ ನೀಡಿದೆ. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಮಹತ್ವದ ಅದೇಶ ಹೊರಡಿಸಿದ್ದಾರೆ.

ಈ ಹಿಂದೆ ರಾಣಿ ಚನ್ನಮ್ಮ ಮೈದಾನದಲ್ಲಿ ಗಣೇಶ ಉತ್ಸವಕ್ಕೆ ಅನುಮತಿ ಕೇಳಿದ್ದ ಗಜಾನನ ಉತ್ಸವ ಮಹಾಮಂಡಳಿ, ಈ ಬಾರಿಯೂ ಸಹ, ಅಧ್ಯಕ್ಷ ಸಂಜಯ್‌ ಬಡಾಸ್ಕರ್ ನೇತೃತ್ವದಲ್ಲಿ ರಂಗ ಪಂಚಮಿ ಪ್ರಯುಕ್ತ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ಮಾಡಿದ ಪಾಲಿಕೆ ವಿವಿಧ ನಿಯಮಗಳನ್ನು ವಿಧಿಸಿ, ಮಾರ್ಚ್ 9 ರಿಂದ 11 ರವರೆಗೂ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ಮತ್ತು ಮೂರ್ತಿ ದಹನಕ್ಕೂ ಸಹ ಅನುಮತಿ ನೀಡಿದೆ.

10 ಸಾವಿರ ಶುಲ್ಕ ಪಡೆದು ಕಾರ್ಯಕ್ರಮದ ವೇಳೆ ಯಾವುದೇ ಗಲಭೆಗೆ ಅವಕಾಶ ನೀಡಬಾರದು. ಅಕಸ್ಮಾತ್ ಯಾವುದೇ ಗಲಾಟೆಯಾಗಿ ಆಸ್ತಿ ಹಾನಿಯಾದ್ರೆ, ಆಯೋಜಕರೇ ಜವಾಬ್ದಾರಿ ಎಂದು ಕಠಿಣ ಷರತ್ತು ವಿಧಿಸಿ ಅನುಮತಿ ನೀಡಿದೆ.

Gayathri SG

Recent Posts

ಸಾಗರೋತ್ತರ ಕಾಂಗ್ರೆಸ್‌  ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್‌ ಪಿತ್ರೋಡಾ ರಾಜೀನಾಮೆ

“ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಹೇಳುವ ಮೂಲಕ ಮನುಷ್ಯರ ಚರ್ಮದ ಬಣ್ಣದ ಕುರಿತು ಕೀಳು ಹೇಳಿಕೆ ನೀಡಿ ವಿವಾದ…

15 mins ago

ಪೂಂಚ್​ನಲ್ಲಿ ವಾಯುಪಡೆಯ ವಾಹನದ ಮೇಲೆ ದಾಳಿ ಮಾಡಿದ ಉಗ್ರರ ಸುಳಿವು ಪತ್ತೆ

ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ  ನಡೆದ ಉಗ್ರರ ದಾಳಿಯಲ್ಲಿ IAF ಕಾರ್ಪೋರಲ್ ವಿಕ್ಕಿ ಪಹಡೆ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು.

31 mins ago

ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದ ಅಣ್ಣಾಮಲೈ

ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ಟೀಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದು…

1 hour ago

ಮಲೆನಾಡಿಗೆ ತಂಪೆರೆದ ವರುಣ-ಆಲಿಕಲ್ಲು ಮಳೆ

ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು, ಸಿಡಿಲಿನೊಂದಿಗೆ ಆಲಿಕಲ್ಲು ಮಳೆ ಸುರಿದಿದೆ. ಹಲವು ದಿನಗಳಿಂದ ವಿಪರೀತ ತಾಪಮಾನದಿಂದ ಬಸವಳಿದಿದ್ದ ಜನರಿಗೆ…

1 hour ago

ರೈತರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ರೈತರಿಗೆ ಆಗಾಗ್ಗೆ ಉಪಟಳ ನೀಡುತ್ತಾ ತಲೆನೋವಾಗಿದ್ದ ಪುಂಡಾನೆಯನ್ನು ಸುಮಾರು  ಇಪ್ಪತೈದು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ  ಅರಣ್ಯಾಧಿಕಾರಿಗಳು ಗೋಪಾಲಸ್ವಾಮಿ ಬೆಟ್ಟದ…

1 hour ago

ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕಗೊಂಡಿದ್ದಾರೆ. 2023 ರಲ್ಲಿ ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ…

1 hour ago