News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಚಿಂಚನಸೂರ್ ಪಕ್ಷ ತ್ಯಜಿಸುವುದರಿಂದ ನಷ್ಟವಿಲ್ಲ- ಸಿಎಂ

KSRTC has reached the stage of closure: Former CM Bommai
Photo Credit : News Kannada

ಹುಬ್ಬಳ್ಳಿ : ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ನಿಂದ ಬಂದಿದ್ದರು, ಮರಳಿ ಅಲ್ಲಿಗೇ ಹೋಗ್ತಿದ್ದಾರೆ. ಇದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯ ತಮ್ಮ ನಿವಾಸದ ಮುಂದೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಗುರುಮಠಕಲ್ ಕ್ಷೇತ್ರದಲ್ಲಿ ಈಗಾಗಲೇ ನಮ್ಮ ಪಕ್ಷದ ಸಂಘಟನೆ ಚೆನ್ನಾಗಿದೆ. ಗುರುಮಠಕಲ್ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುತ್ತದೆ. ಮಾರ್ಚ್ 24 ಕ್ಕೆ ರಾಜ್ಯಕ್ಕೆ ಅಮಿತ್ ಶಾ ಬರುತ್ತಾರೆ. ಮಾರ್ಚ್ 25 ಕ್ಕೆ ಪ್ರಧಾನಿ ಮೋದಿ ಬರುತ್ತಾರೆ. ಮಾರ್ಚ್ 26 ಕ್ಕೆ ಮತ್ತೇ ಅಮಿತ್ ಶಾ ಪ್ರವಾಸ ಮಾಡುತ್ತಾರೆ ಎಂದರು.

ಬಿಜೆಪಿ ಜನರ ಭಾವನಾತ್ಮಕ ವಿಚಾರಗಳ ಜೊತೆ ಆಟವಾಡ್ತಿದೆ ಎಂಬ ಆರೋಪದ ಬಗ್ಗೆ ಮಾತನಾಡಿದ ಅವರು, ಇತಿಹಾಸವನ್ನು ಮರೆಮಾಚುವ ಕೆಲಸ ನಡೆದಿದೆ.ಉರಿಗೌಡ ಅಂತ ಹೇಳಲ್ಲ. ಹಲವಾರು ಪ್ರಕರಣಗಳಲ್ಲಿ ಸತ್ಯ ಮರೆಮಾಚುವ ಕೆಲಸ ನಡೆದಿದೆ. ಅವುಗಳ ಸತ್ಯ ಹೇಳಿದರೆ ಇವರಿಗೆ ತಡೆದುಕೊಳ್ಳೋಕೆ ಆಗಲ್ಲ. ಸತ್ಯ ಶೋಧನೆ ಆದಾಗ ಎಲ್ಲವೂ ಹೊರಗೆ ಬರುತ್ತೆ, ಜಯ ಸಿಗುತ್ತದೆ ಎಂದ ಅವರು, ಸಾರಿಗೆ ನೌಕರರ ಮುಷ್ಕರ ವಿಚಾರವಾಗಿ ಮಾತನಾಡಿದ್ದು, ಅವರ ಬೇಡಿಕೆ ಈಡೇರಿಸಿದ್ದೇವೆ. ಪ್ರಮುಖ ಸಂಘಟನೆ ಮುಖಂಡರೊಂದಿಗೆ ಚರ್ಚಿಸಿ, ಬಗೆಹರಿಸಿದ್ದೇನೆ.

ಅಭಿನಂದನೆ ಸಲ್ಲಿಸೊ ಜೊತೆಗೆ, ಮುಷ್ಕರ ವಾಪಸ್ ಪಡೆದಿದ್ದಾರೆ. ಪ್ರಮುಖ ಸಂಘಟನೆ ಜೊತೆ ಮಾತನಾಡಿದ್ದು, ಮುಷ್ಕರಕ್ಕೆ ಹೋಗೋ ಪ್ರಶ್ನೆಯೇ ಇಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು