ಹುಬ್ಬಳ್ಳಿ: ರಾಜ್ಯ ಸರ್ಕಾರದ ಸಚಿವರ ವಿರುದ್ಧ ಯಾವುದೇ ದೂರು ಕೇಳಿ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶಾಸಕರು ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಒತ್ತಾಯ ಮಾಡುತ್ತಿದ್ದಾರೆ. ಕಳೆದ ವಾರವೇ ಸಭೆ ನಡೆಸಬೇಕಿತ್ತು. ಆದರೆ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರೇ ಸಭೆ ನಡೆಸುವುದಾಗಿ ಹೇಳಿದ್ದರು. ಹೀಗಾಗಿ ಸ್ವಲ್ಪ ವಿಳಂಬವಾಗಿದೆ. ಗುರುವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ ಎಂದರು.
ಸರ್ಕಾರ ಅಸ್ತಿರಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಈ ಪ್ರಶ್ನೆಯನ್ನು ನೀವು ಅವರಿಗೆ ಕೇಳಿ ಎಂದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ಕಾಂಗ್ರೆಸ್ ರಾಜ್ಯದಲ್ಲಿ 15 ರಿಂದ 20 ಸ್ಥಾನಗಳನ್ನು ಖಂಡಿತಾ ಗೆಲ್ಲುತ್ತೇವೆ ಎಂದರು.