ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಕಾಮಣ್ಣನ ಪ್ರತಿಷ್ಠಾಪನೆಗೆ ಅನುಮತಿ ಇಲ್ಲ- ರಮಣ ಗುಪ್ತಾ

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಒಂದು ದಿನವಾಗಲಿ, ಒಂದು ಕ್ಷಣವಾಗಲಿ ಕಾಮಣ್ಣನ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ. ಆಯೋಜಕರು 10 ದಿನ ಮೊದಲೇ ಮನವಿ ಕೊಟ್ಟಿದ್ದರೇ ನಮಗೆ ಬಂದೋಬಸ್ತ್ ಗೆ ಸಮಸ್ಯೆ ಆಗುತ್ತಿರಲ್ಲಿಲ್ಲಾ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ರಮಣ ಗುಪ್ತಾ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ದೊಡ್ಡ ನಗರವಾದ ಕಾರಣ ಬಂದೋಬಸ್ತ್ ಅನಿವಾರ್ಯವಾಗಿರುತ್ತದೆ. ನಾವು ಮೊದಲೇ ಮನವಿ ಕೊಟ್ಟಿದ್ದರೇ, ಎಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಪೊಲೀಸ್ ನಿಯೋಜನೆ, ಸಿಸಿ ಕ್ಯಾಮೆರಾ ಅಳವಡಿಕೆ ಮಾಡುತ್ತಿದ್ದೆವು. ಈಗಾಗಲೇ ನಗರದಲ್ಲಿ 472 ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಆದರೆ ಇವೆಲ್ಲ ಒಂದೇ ದಿನ ಪ್ರತಿಷ್ಠಾಪನೆ ಆಗಿವೆ ಎಂದರು.

ನಮ್ಮ ಪೊಲೀಸ್ ಸಿಬ್ಬಂದಿ ಡಿವೈಡ್ ಆಗಿದೆ. ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಕೆಲವು ಮಾಹಿತಿ ಬಂದಿವೆ. ಕಾನೂನು ಸುವ್ಯವಸ್ಥೆ ವಿಚಾರವಾಗಿ ಮಾಹಿತಿ ಬಂದಿದೆ. ಗುಪ್ತಚರ ಪೊಲೀಸ್ ಮೂಲಗಳ ಮಾಹಿತಿ ಬಂದಿದೆ. ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಬೇರೆ ಮಾಹಿತಿಗಳು ಬಂದಿವೆ. ಈ ನಿಟ್ಟಿನಲ್ಲಿ ಒಂದು ದಿನ ಆಗಲಿ, ಒಂದು ಕ್ಷಣ ಆಗಲಿ ಅವಕಾಶ ಇಲ್ಲ ಎಂದ ಕಮಿಷನರ್ ಮಾಹಿತಿ ನೀಡಿದರು.

ಪ್ರಧಾನಿ ಆಗಮನ ಹಿನ್ನಲೆ ಭದ್ರತಾ ದೃಷ್ಟಿಯಿಂದ ಪ್ರತಿಪ್ಠಾಪನೆಗೆ ಅವಕಾಶ ನೀಡಿಲ್ಲ: ಪಾಲಿಕೆ ಆಯುಕ್ತ ಗೋಪಾಲಕೃಷ್ಣ

ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಪಾಲಿಕೆಗೆ ಹೋಳಿ ಹುಣ್ಣಿಮೆ ಪ್ರಯುಕ್ತ ಕಾಮಣ್ಣನ ಪ್ರತಿಷ್ಠಾಪನೆ ಮಾಡಲು ಗಜಾನನ ಉತ್ಸವ ಮಹಾಮಂಡಳಿಯಿಂದ ಮನವಿ ಕೊಟ್ಟಿತ್ತು. ಆದರೆ ಸೂಕ್ತ ಬಂದೋಬಸ್ತ್ ಇಲ್ಲದ ಕಾರಣ ನಾವು ಅನುಮತಿ ಕೊಟ್ಟಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಬರುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ಅರ್ಜಿಯನ್ನು ಪರಿಗಣಿಸಲಿಲ್ಲ ಎಂದು ಪಾಲಿಕೆ ಆಯುಕ್ತ ಡಾ. ಬಿ ಗೋಪಾಲಕೃಷ್ಣ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾವು ಈಗಾಗಲೇ ಆಯೋಜಕರನ್ನು ಕರೆದು ಹೇಳಿದ್ದೇವೆ. ಮೇಯರ್ ಅವರು ಸದಸ್ಯರೊಂದಿಗೆ ಚರ್ಚೆ ಮಾಡಿ ಅವರ ನಿಲುವು ಹೇಳಿದ್ದಾರೆ. ಆದರೆ ಅಂತಿಮವಾಗಿ ಆಯುಕ್ತರೇ ಅನುಮತಿ ಕೊಡಬೇಕಾದವರು. ಹೀಗಾಗಿ ಭದ್ರತಾ ದೃಷ್ಟಿಯಿಂದ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದೇವೆ. ಪ್ರಧಾನಿ ಮೋದಿ ಆಗಮದಿಂದಾಗಿ ಪೊಲೀಸ್ ಬಂದೋಬಸ್ತ್ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ಧಾರವಾಡಕ್ಕೆ ಹೋಗುತ್ತಾರೆ. ಆದರೆ ಇದೇ ಏಳರಂದು ಮನವಿ ಪರಿಗಣಿಸಲಾಗಿಲ್ಲ ಎಂದು ಆಯುಕ್ತ ಡಾ. ಬಿ ಗೋಪಾಲಕೃಷ್ಣ ತಿಳಿಸಿದ್ದಾರೆ.

ಮೇಯರ್ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಮ್ಮ ಫೋಕಸ್ ಮೋದಿ ಅವರ ಕಾರ್ಯಕ್ರಮ ಇರುವ ಕಾರಣ ಆಯೋಜಕರಿಗೆ ತಿಳಿಸಿದ್ದೇವೆ. ಮೋದಿ ಅವರು ಐಐಟಿ ಉದ್ಘಾಟನೆಗೆ ಬರೋ ಕಾರಣ ನಾವು ಅರ್ಜಿಯನ್ನು ಪರಿಗಣಿಸಲಿಲ್ಲ. ನಾವು ಮುಂಜಾಗೃತ ಕ್ರಮದಿಂದ ಈದ್ಗಾ ಮೈದಾನದಲ್ಲಿ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಡಲಿಲ್ಲ. ನನಗೆ ಯಾವುದೇ ರಾಜಕೀಯ ನಾಯಕರು ಒತ್ತಡ ಹಾಕಿಲ್ಲ ಎಂದರು.

Gayathri SG

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

5 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

5 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

5 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

6 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

6 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

6 hours ago