ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕೋ ಕೆಲಸ ಮಾಡ್ತಿವೆ- ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಜೇನುನೋಣಗಳಿಂದ ಕಚ್ಚಿಸಿಕೊಂಡರೂ ನಾನು ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ. ಆದರೆ, ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕೋ ಕೆಲಸ ಮಾಡ್ತಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ಗೆ ಟಾಂಗ್ ಕೊಟ್ಟರು.

ನಗರದಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ವಿಚಾರ 30 ವರ್ಷಗಳಿಂದ ಇತ್ತು. ಆದರೆ, ಕಾಂಗ್ರೆಸ್ ಮೂಗಿಗೆ ತುಪ್ಪ ಹಚ್ಚಿ ಕೊನೆ ಘಳಿಗೆಯಲ್ಲಿ ಕೈಕೊಟ್ಟಿತು. ನಮಗೆ ಬದ್ಧತೆ ಇದೆ. ಇದರ ಬಗ್ಗೆ ಅಧ್ಯಯನ ಮಾಡಿ, ಸಚಿವ ಸಂಪುಟ ಉಪ ಸಮಿತಿ ರಚಿಸಿ, ಕಾನೂನು ಪ್ರಕಾರ ಮಾಡಿದ್ದೇವೆ. ನಾವು ಮಾಡೋಕೆ ಆಗದ್ದನ್ನು ಬಿಜೆಪಿಯವರು ಮಾಡಿದ್ದಾರೆ ಅಂತಾ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಅದ್ಯಾವುದಕ್ಕೂ ಬೆಲೆ ಇಲ್ಲ. ಅವರು ಯಾವಾಗಲೂ ಎಸ್‌ಸಿ, ಎಸ್‌ಟಿ ಸಮುದಾಯದವರನ್ನು ಯಾಮಾರಿಸಿಕೊಂಡೇ ಬಂದಿದ್ದರು ಎಂದರು.

ಹೇಳಿಕೆಗಳ ಮೂಲಕ ಸಹಾನುಭೂತಿ ತೋರಿಸಿ ಈ ಚುನಾವಣೆಯಲ್ಲಿಯೂ ಯಾಮಾರಿಸಬಹುದು ಎಂದು ಕೊಂಡಿದ್ದರು. ಸಾಮಾಜಿಕ, ಅಭಿವೃದ್ಧಿ ವಿಚಾರದಲ್ಲಿ ಸಂಘ ಸಂಸ್ಥೆಗಳ ಜೊತೆ ಚರ್ಚಿಸಿ ಹಲವಾರು ತೀರ್ಮಾನ ಮಾಡಿದ್ದೇವೆ. ನಿರ್ಣಾಯಕ ತೀರ್ಮಾನ ಕೈಗೊಳ್ಳಲು ನಮ್ಮ ಬದ್ಧತೆ ಕಾರಣ. ಆ ಜನಾಂಗಕ್ಕೆ ನ್ಯಾಯ ಕೊಡಿಸೋವರೆಗೂ ವಿಶ್ರಮಿಸಲ್ಲ ಎಂದರು.

ಇವರೆಲ್ಲ ಜೇನುಗೂಡಿಗೆ ಕೈಹಾಕ್ತಿದಾರೆ ಅಂತ ಹೇಳಿದ್ದರು. ಜೇನುಗೂಡಿಗೆ ಕೈ ಹಾಕದೇ ಇದ್ದಲ್ಲಿ ಜೇನು ಸಿಗಲ್ಲ ಅಂತ ಗೊತ್ತಿತ್ತು. ನಾನು ಜೇನುಗೂಡಿಗೆ ಕೈಹಾಕ್ಕೇನೆ, ಜೇನು ನೊಣದಿಂದ ಕಚ್ಚಿಸಿಕೊಂಡರೂ ಪರ್ವಾಗಿಲ್ಲ, ಆ ಜನಾಂಗಕ್ಕೆ ಜೇನಿನ ಹನಿಯನ್ನು ಕೊಡಿಸಲು ಸಿದ್ಧ ಅಂತ ಹೇಳಿದ್ದೆ ಈಗ ಅದನ್ನು ಮಾಡಿದ್ದೇನೆ ಎಂದರು.

ಚುನಾವಣೆ ಘೋಷಣೆ ನಂತರ ಬಿಜೆಪಿ ಪಟ್ಟಿ ಬಿಡುಗಡೆ ಯಾಗುತ್ತದೆ : ಸಿಎಂ

ಮೊದಲು ಶೇಕಡಾ 4 ಪರ್ಸೆಂಟ್ ಮೀಸಲಾತಿ ಇತ್ತು. ಈಗ ಶೇ. 10 ರಷ್ಟು ಮೀಸಲಾತಿ ಇರೋ ಕಡೆ ಹಾಕಿದ್ದೇವೆ. ಅದು ಹೇಗೆ ಅನ್ಯಾಯ ಆಗುತ್ತದೆ. ಅಲ್ಪಸಂಖ್ಯಾತರ ಹಿತರಕ್ಷಣೆ ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಂಡಿದ್ದೇವೆ ಎಂದು
ಮುಸ್ಲಿಂಮರನ್ನು ಇಡಬ್ಲ್ಯುಎಸ್ ಸೇರ್ಪಡೆ ಮಾಡಿರೋ ವಿಚಾರಕ್ಕೆ ಪ್ರತಿಕ್ರಿಯಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪ್ರಕ್ರಿಯೆ ಮಹದಾಯಿ ಯೋಜನೆ ಕಾಮಗಾರಿಗೆ ತೊಡಕಾಗಲ್ಲ. ನೀತಿ ಸಂಹಿತೆ ಜಾರಿಯಾದ್ರೂ ಟೆಂಡರ್ ಪ್ರಕ್ರಿಯೆ ನಡೆಯುತ್ತದೆ. ಅಷ್ಟರೊಳಗಾಗಿ ಅರಣ್ಯ ಇಲಾಖೆ ಕ್ಲಿಯರೆನ್ಸ್ ಸಿಗೋ ವಿಶ್ವಾಸವಿದೆ. ಚುನಾವಣೆ ನಂತರ ಕಾಮಗಾರಿ ಆರಂಭವಾಗುತ್ತದೆ ಎಂದು ಮಹದಾಯಿ ಕುರಿತು ಸಿಎಂ ಹೇಳಿದರು.

ಇನ್ನು, ಚುನಾವಣೆ ಘೋಷಣೆ ನಂತರ ಬಿಜೆಪಿ ಪಟ್ಟಿ ಬಿಡುಗಡೆ ಯಾಗುತ್ತದೆ. ಸರಿಯಾದ ಸಮಯದಲ್ಲಿ ನಮ್ಮ ಪಟ್ಟಿ ಬಿಡುಗಡೆಯಾಗುತ್ತದೆ. ಇವತ್ತಿನ ಕೋರ್ ಕಮಿಟಿಯಲ್ಲಿ ಚುನಾವಣಾ ನಿರ್ವಹಣೆ ಬಗ್ಗೆ ಚರ್ಚೆಯಾಗುತ್ತದೆ ಎಂದರು.

Gayathri SG

Recent Posts

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

16 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

27 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

1 hour ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

1 hour ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

2 hours ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

2 hours ago