ಹುಬ್ಬಳ್ಳಿ: ಮೋದಿಯವರು ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸುವುದು ಯುವಕರಲ್ಲಿ ಹುರುಪು ತುಂಬಲಿದೆ

ಹುಬ್ಬಳ್ಳಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸುವುದರಿಂದ ದೇಶ ಹಾಗೂ ರಾಜ್ಯದ ಯುವಕರಲ್ಲಿ ಹುರುಪು ಹಾಗೂ ಉತ್ಸಾಹ ತುಂಬಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಅಖಿಲ ಭಾರತ ಯುವಜನೋತ್ಸವ ಪ್ರಥಮ ಬಾರಿಗೆ ಈ ಭಾಗದಲ್ಲಿ ಒಂದು ವಾರಗಳ ಕಾಲ ನಡೆಯಲಿದೆ. ಭಾರತದ ಜನಸಂಖ್ಯಾ ಲಾಭವನ್ನು ಪ್ರಧಾನಿಗಳು ತಿಳಿಸಿದ್ದಾರೆ. ಜನಸಂಖ್ಯೆ ಅಭಿವೃದ್ಧಿಗೆ ಮಾರಕ ಎನ್ನುತ್ತಿದ್ದುದನ್ನು ಪರಿವರ್ತಿಸಿ ಜನಸಂಖ್ಯೆಯನ್ನು ಬಳಸಿಕೊಂಡು ದೇಶ ಕಟ್ಟಬಹುದು. ಶೇ 40 ರಷ್ಟು ಯುವಜನಾಂಗವಿರುವ ದೇಶದಲ್ಲಿ ಅವರಿಗೆ ಕೌಶಲ್ಯ ತರಬೇತಿ ನೀಡಿ ಅವಕಾಶ ಕಲ್ಪಿಸಿದರೆ ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಸಾಧ್ಯ ಎಂದು ಮನಗಂಡು ಯುವಕರಿಗೆ ಅಗತ್ಯ ಕ್ಷೇತ್ರಗಳಲ್ಲಿ ಹೊಸ ಯೋಜನೆಗಳನ್ನು ಪ್ರಧಾನಮಂತ್ರಿ ಗಳು ರೂಪಿಸಿದ್ದಾರೆ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರಥಮ ಬಾರಿಗೆ ಮೂರು ವರ್ಷಗಳ ಲ್ಲಿ ಹಲವಾರು ಡಿಗ್ರಿಗಳನ್ನು ಪಡೆಯಬಹುದಾಗಿದೆ. ಬಹುಮಾಧ್ಯಮ ಶಿಕ್ಷಣವನ್ನು ದೇಶದಲ್ಲಿ ಅನುಷ್ಠಾನಕ್ಕೆ ತರಲಾಗಿದೆ ಎಂದರು.

ಕೌಶಲ್ಯಾಭಿವೃದ್ಧಿಗೆ ಒತ್ತು

ಕೌಶಲ್ಯಾಭಿವೃದ್ಧಿಗೆ ಸ್ಕಿಲ್ ಇಂಡಿಯಾ, ಮುದ್ರಾ ಯೋಜನೆ, ಖೇಲೋ ಇಂಡಿಯಾ, ಫಿಟ್ ಇಂಡಿಯಾ, ಜೀತೋ ಇಂಡಿಯಾ ಮೂಲಕ ಒಲಂಪಿಕ್ಸ್ ನಲ್ಲಿ ಪ್ರಥಮ ಬಾರಿಗೆ ದೊಡ್ಡ ಪ್ರಮಾಣದ ಸಾಧನೆಯಾಗಿದೆ. ಸಂಸ್ಕೃತಿ ವಲಯದಲ್ಲಿಯೂ ಯುವಕರಿಗೆ ಸಮಗ್ರ ಅವಕಾಶ ನೀಡುವ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಅವರು ಹುಬ್ಬಳಿಗೆ ಆಗಮಿಸುವುದರಿಂದ ಯುವಜನೋತ್ಸವ ಯಶಸ್ವಿಯಾಗುವುದು ನಿಶ್ಚಿತ ಎಂದರು.

Ashika S

Recent Posts

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

8 mins ago

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

23 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

44 mins ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

1 hour ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

1 hour ago

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

2 hours ago