ಹುಬ್ಬಳ್ಳಿ: ಕುಟುಂಬ ಸಮೇತವಾಗಿ ಬಂದು ಮತ ಚಲಾಯಿಸಿದ ಶೆಟ್ಟರ್

ಹುಬ್ಬಳ್ಳಿ: ಇಲ್ಲಿಯ ಕುಸುಗಲ್ ರಸ್ತೆ ಶಬರಿ ನಗರದ ಎಸ್.ಬಿ.ಐ ಆಂಗ್ಲ ಮಾಧ್ಯಮ ಶಾಲೆಯ ಮತಗಟ್ಟೆ ನಂ. 122 ರಲ್ಲಿ ಹು-ಧಾ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ ಶೆಟ್ಟರ್ ಕುಟುಂಬ ಸಮೇತವಾಗಿ ಬಂದು ಮತ ಚಲಾಯಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಕಡೆ ದೊಡ್ಡ ಪ್ರಮಾಣದಲ್ಲಿ ಮತದಾನವಾಗುತ್ತಿದೆ . ನಾನು ಕಾಂಗ್ರೆಸ್ ನಿಂದ ಸ್ಪರ್ಧಿಸಿದ ಬಳಿಕ ಜನರಿಂದ ಹಿಂದಿಗಿಂತಲೂ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಜನರ ಉತ್ಸಾಹ ಗಮನಿಸಿದರೆ ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.

ಮನೆಮನೆಗೆ ಭೇಟಿ ನೀಡಿ ಮಂಗಳವಾರ ಪ್ರಚಾರ ನಡೆಸಿದಾಗ, ಜನರು ಸಹ ಉತ್ತಮವಾಗಿ ಸ್ಪಂದಿಸಿದ್ದಾರೆ. ಮತದಾರರಿಗೆ ಬಿಜೆಪಿ ಅಭ್ಯರ್ಥಿಯ ಮುಖ ಪರಿಚಯವೇ ಇಲ್ಲ. ಹಾಗಾಗಿ, ನನ್ನ ಗೆಲುವು ನಿಶ್ಚಿತ ಎಂದರು.

ಇದು ಕಾಂಗ್ರೆಸ್ ಮತ್ತು ಬಿಜೆಪಿ ನಡುವಣ ಚುನಾವಣೆಯೇ ಹೊರತು, ಶೆಟ್ಟರ್ ಮತ್ತು ಕೇಂದ್ರದ ನಡುವಣ ಚುನಾವಣೆಯಲ್ಲ. ಬಿಜೆಪಿಯವರು ಪಕ್ಷ ಮುಖ್ಯ ಎನ್ನುತ್ತಾರೆ. ಆದರೆ, ಪಕ್ಷಕ್ಕೆ ವ್ಯಕ್ತಿಯೂ ಅಷ್ಟೇ ಮುಖ್ಯ. ಹಾಗಾದರೆ, ಪ್ರಧಾನಿ ಮೋದಿ ಅವರ ಭಾವಚಿತ್ರ ಇಟ್ಟುಕೊಂಡ ಯಾಕೆ ಮತ ಕೇಳುತ್ತಾರೆ ಎಂದು ಪ್ರಶ್ನಿಸಿದರು.ಈ ಚುನಾವಣೆಯಲ್ಲಿ ಒಳ ಹೊಡೆತ  ಮತ್ತು ಹೊರ ಹೊಡೆತ ಭಾರೀ ಕೆಲಸ ಮಾಡಲಿದೆ. ಫಲಿತಾಂಶದ ದಿನ ಅದರ ಪರಿಣಾಮ ಗೊತ್ತಾಗಲಿದೆ ಎಂದು ಹೇಳಿದರು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago