ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಬಿಎಸ್ ವೈ ಮನೆ ಮೇಲೆ ಕಲ್ಲು ತೂರಾಟ ರಾಜಕೀಯ ಪ್ರೇರಿತ- ಅರವಿಂದ ಬೆಲ್ಲದ

ಹುಬ್ಬಳ್ಳಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮನೆಯ ಮೇಲಿನ ಕಲ್ಲು ತೂರಾಟ ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ್ ತಿಳಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಬಂಜಾರ ಸಮೂದಾಯದ ಪ್ರತಿಭಟನೆ ವೇಳೆಯಲ್ಲಿ ಮನೆಯ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಕಲ್ಲು ತೂರಿದವರು ನಿಜವಾದ ಮೀಸಲಾತಿ ಬಗ್ಗೆ ಕಳಕಳಿ ಇದ್ದವರಲ್ಲ. ಒಳಮೀಸಲಾತಿ ಕೊರಚ, ಭೋವಿ – ವಡ್ಡರು ಶೇ.03 ರಷ್ಟು ಮೀಸಲಾತಿ ಕೇಳಿದ್ದರು. ಆದರೆ ಸರ್ಕಾರ ಅದಕ್ಕಿಂತಲೂ ಹೆಚ್ಚು ಮೀಸಲಾತಿ ಕೊಟ್ಟಿದೆ. ಎಡಗೈ ಮತ್ತು ಬಲಗೈ ಬೇಡಿಕೆಯಂತೆ ಒಳಮೀಸಲಾತಿ ಕೊಟ್ಟಿದ್ದೇವೆ. ನಮ್ಮ ಸರ್ಕಾರ ಜಾಣತನದ ನಡೆ ಅನುಸರಿಸಿದೆ ಎಂದರು.

ಜನರ ಅಪೇಕ್ಷೆಗೆ ತಕ್ಕಂತೆ ಚುನಾವಣೆಗೆ ಕೊಟ್ಟಿದ್ದೇವೆ.‌ ಲಿಂಗಾಯಿತ ಸಮುದಾಯಕ್ಕೂ ಹೆಚ್ಚು ಮೀಸಲಾತಿ ಕೊಟ್ಟಿದೆ. ನಿಜವಾದ ಹೋರಾಟ ಮಾಡುತ್ತಿದ್ದವರಿಗೆ ಮೀಸಲಾತಿ ಖುಷಿಯಾಗಿದೆ. ಕಾಂಗ್ರೆಸ್ ನಾಯಕರಿಗೆ ಮಾತ್ರ ಕಸಿವಿಸಿಯಾಗಿದೆ ಎಂದು ತಿಳಿಸಿದರು.

ಅಂಚಟಗೇರಿ ಟಿಕೇಟ್ ಕೇಳುತ್ತಿರೊ ವಿಚಾರವಾಗಿ ಮಾತನಾಡಿ, ಈರೇಶ ಅಂಚಟಗೇರಿ ಅವರು ತಮ್ಮ ಆಸೆಯಂತೆ ಟಿಕೆಟ್ ಕೇಳಿದ್ದಾರೆ. ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳುತ್ತೆ, ನನಗೆ ಯಾರೇ ಎದುರಾಳಿಯಾದ್ರೂ ಕಳೆದ ಬಾರಿಗಿಂತ ಹೆಚ್ಚು ಮತಗಳ ಅಂತರದಿಂದ ಗೆಲ್ತೇನೆ ಎಂದು ಅರವಿಂದ ಬೆಲ್ಲದ್ ತಿಳಿಸಿದರು.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago