News Karnataka Kannada
Wednesday, May 01 2024
ಹುಬ್ಬಳ್ಳಿ-ಧಾರವಾಡ

ನಾನು ಸನಾತನ‌ ಧರ್ಮದ ಬಗ್ಗೆ ಮಾತನಾಡಿಲ್ಲ: ಸಚಿವ ಜಿ‌. ಪರಮೇಶ್ವರ

I have not spoken about Sanatan Dharma: Minister By PTI . Parameshwara
Photo Credit : News Kannada

ಹುಬ್ಬಳ್ಳಿ: ನಾನು ಸನಾತನ‌ ಧರ್ಮದ ಬಗ್ಗೆ ಮಾತನಾಡಿಲ್ಲ. ಬೇರೆಯವರು ಏನು ವಿಶ್ಲೇಷಣೆ ಮಾಡ್ತಾರೆ ಅದಕ್ಕೆಲ್ಲ ನಾನು ಉತ್ತರ ಕೊಡಲ್ಲ ಎಂದು ಗೃಹ ಸಚಿವ ಜಿ‌. ಪರಮೇಶ್ವರ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಮಯ ಸಂದರ್ಭದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ನಮ್ಮ ಅಭಿಪ್ರಾಯ ಹೇಳಿದ್ದೇನೆ ಅಷ್ಟೇ .ಯಾರು ಏನು ಬೇಕಾದರೂ ವಿಶ್ಲೇಷಣೆ ಮಾಡಲಿ . ಮೋದಿ ಅವರು ನಾನು ಹೇಳಿರೋ ಹೇಳಿಕೆ ಬಗ್ಗೆ ಮಾತನಾಡಿಲ್ಲ. ಬಿಜೆಪಿಯವರು ಹೋರಾಟ ಮಾಡಲಿ ನಾವು ಉತ್ತರ ಕೊಡ್ತೀವಿ.‌ಈಗಾಗಲೇ ಜನ ಬಿಜೆಪಿಗೆ ಉತ್ತರ ಕೊಟ್ಟಿದ್ದಾರೆ. ಬರಗಾಲ ಘೋಷಣೆ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆಯಾಗಿದೆ. ಶಿಘ್ರವೇ ಕೆಲ ತಾಲೂಕುಗಳನ್ನ ಬರಪೀಡಿತ ಎಂದು ಘೋಷಣೆ ಮಾಡಲಾಗುವುದು. ಈ ಬಗ್ಗೆ ಕೇಂದ್ರಕ್ಕೂ ವರದಿ ಕಳಿಸುತ್ತೇವೆ ಎಂದರು.

ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಬಿಜೆಪಿಯವರಿಗೆ ಏನು ಬೇರೆ ಕಾನೂನು ಇದೆಯಾ.?ಯಾರು ಕಾನೂನಿನ ವಿರುದ್ಧ ನಡೆದುಕೊಳ್ತಾರೆ ಅಂತವರ ವಿರುದ್ಧ ಕ್ರಮ‌ಕೈಗೊಳ್ಳಲಾಗ್ತಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು