News Karnataka Kannada
Monday, May 13 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿಯಲ್ಲಿ ಅನಧಿಕೃತ ಅಂಗಡಿ ತೆರವು ಕಾರ್ಯಾಚರಣೆ

Illegal dabba shop in Hubballi to be removed
Photo Credit : News Kannada

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಗದಗ ರಸ್ತೆಯ ಅಕ್ಕಪಕ್ಕದಲ್ಲಿ ಅನಧಿಕೃತವಾಗಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದ  ಅಂಗಡಿಗಳನ್ನು ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

25 ಕಾರ್ಮಿಕರು ಎರಡು ಜೆಸಿಬಿ, ನಾಲ್ಕು ಟ್ರ್ಯಾಕ್ಟರ್‌ಗಳ ಮೂಲಕ ಅಂಗಡಿಗಳನ್ನು ತೆರವು ಮಾಡಿದರು. ಈ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

ರಸ್ತೆ ಪಕ್ಕದ ಪಾದಚಾರಿ ಮಾರ್ಗದಲ್ಲಿ ಮೂರು-ನಾಲ್ಕು ವರ್ಷಗಳಿಂದ ಕೆಲವರು ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದರು. ತೆರವು ಮಾಡಲು ಅನೇಕ ಬಾರಿ ಸೂಚನೆ ನೀಡಿದರೂ ಕೇಳಿರಲಿಲ್ಲ. ಈ ಹಿನ್ನೆಲೆಯಲ್ಲಿ ವಲಯ ಕಚೇರಿ 6ರ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು’ ಎಂದು ಪಾಲಿಕೆ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್.ಸಿ. ಬೇವೂರ ಮಾಹಿತಿ ನೀಡಿದ್ದಾರೆ.

ಈ ವೇಳೆಯಲ್ಲಿ ಪಾಲಿಕೆ ಅಭಿವೃದ್ಧಿ ಅಧಿಕಾರಿಗಳು, ಎಂಜಿನಿಯರ್, ಆರೋಗ್ಯ ನಿರೀಕ್ಷಕರು ಇದ್ದರು. ಅಂಗಡಿಗಳನ್ನು ಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆ ಮೂಲಕ ತೆರವುಗೊಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು