ಧಾರವಾಡದಲ್ಲಿ ಜೀವಜಲಕ್ಕಾಗಿ ಹಾಹಾಕಾರ, ಜನರ ಪ್ರತಿಭಟನೆ

ಧಾರವಾಡ: ನಗರದ ಕೇಲಗೇರಿ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ತಡರಾತ್ರಿ ರಸ್ತೆ ಸಂಚಾರ ಸ್ಥಗಿತಗೊಳಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಈ ಮೊದಲು ವಾರಕ್ಕೊಮ್ಮೆ ಬರುತ್ತಿದ್ದ ನೀರು ಈಗ ೧೬ ದಿನಗಳು ಒಂದೊಂದು ಕಡೆ ತಿಂಗಳಿಗೊಮ್ಮೆ ಬರುವಂತಾಗಿದೆ. ಸಮಸ್ಯೆಯ ಗಂಭೀರತೆ ಅರಿತು ಅದನ್ನು ನಿವಾರಿಸಬೇಕಾದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಮಯಕ್ಕೆ ಸರಿಯಾಗಿ ನೀರು ಸರಬರಾಜು ಆಗುವಂತೆ ನೋಡಿಕೊಳ್ಳಬೇಕು. ಇಲ್ಲದೇ ಹೋದಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಪ್ರತಿಭಟನಕಾರರು ಎಚ್ಚರಿಕೆ ನೀಡಿದರು.

ಕುಡಿಯಲು ನೀರು ಸರಬರಾಜು ಮಾಡುವವರೆಗೂ ರಸ್ತೆ ತಡೆ ನಡೆಸುವುದಾಗಿ ಪ್ರತಿಭಟನಾಕಾರರು ಪಟ್ಟು ಹಿಡಿದರು. ಸಾರ್ವಜನಿಕರು ಪಿಬಿ ರಸ್ತೆಯ ಮೇಲೆ ಕುಳಿತು ರಸ್ತೆ ತಡೆ ಮಾಡಿದ್ದರಿಂದ ರಸ್ತೆ ಸಂಚಾರಕ್ಕೆ ತಡೆ ಉಂಟಾಯಿತು. ಅದರಿಂದಾಗಿ ಸುಮಾರು ಎರಡು ಗಂಟೆಗೂ ಅಧಿಕ ಕಾಲ ನೂರಾರು ವಾಹನಗಳು ರಸ್ತೆಯ ಮೇಲೆ ಕಾಯ್ದು ನಿಂತವು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸಲು ಪ್ರಯತ್ನಿಸಿದರು.
ಪೊಲೀಸರ ಮನವಿಗೆ ಸ್ಪಂದಿಸದ ಪ್ರತಿಭಟನಾಕಾರರು, ನೀರು ಬಿಡುವವರೆಗೂ ರಸ್ತೆತಡೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ಸರ್ಕಾರದ ವಿರುದ್ಧ ಕಿಡಿ ಕಾರಿದರು.

ಜನರು ಕುಡಿಯುವ ನೀರಿಗೆ ಪರದಾಡು ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆಲ್ಲ ಕಾರಣ ಖಾಸಗಿ ಕಂಪನಿ. ಹುಬ್ಬಳ್ಳಿ ಧಾರವಾಡ ಅವಳಿ ನಗರದ‌‌ ಮನೆ ಮನೆಗಳಿಗೆ ಕುಡಿಯುವ ನೀರು ಪೂರೈಸುವ ಜವಾಬ್ದಾರಿಯನ್ನು ಜಲಮಂಡಳಿಯಿಂದ ಖಾಸಗಿ ಎಲ್ ಆ್ಯಂಡ್ ಟಿ ಕಂಪನಿಗೆ ನೀಡಿ ಪಾಲಿಕೆ ಕೈತೊಳೆದುಕೊಂಡಿತ್ತು. ಈ ಪ್ರಕ್ರಿಯೆ ನಡೆದು ಆರೇಳು ತಿಂಗಳುಗಳೇ ಕಳೆದಿದೆ. ಆದ್ರೇ ನೀರು ಪೂರೈಸುವ ಜವಾಬ್ದಾರಿ ಹೊತ್ತ ಎಲ್‌ಆಂಡ್ ಟಿ ಸಮರ್ಪಕವಾಗಿ ನೀರು ಪೂರೈಸುತ್ತಿಲ್ಲ. ಪೈಪ್ ಲೈನ್ ಗಳ ದುರಸ್ತಿ ಮಾಡುತ್ತಿಲ್ಲ.

ಈಗಾಗಲೇ ಜಲಮಂಡಳಿ ಮೂಲಕ ನೀರು ಪೂರೈಸುತ್ತಿದ್ದ ಸಿಬ್ಬಂದಿಗಳನ್ನು ಕೆಲಸದಿಂದ ಕೈಬಿಟ್ಟಿದೆ. ಆದ್ರೇ ಆ ಜಾಗಕ್ಕೆ‌ ಸಿಬ್ಬಂದಿ ನೇಮಕಗೊಂಡಿಲ್ಲ ಇದರಿಂದ ನೀರು ಪೂರೈಕೆ ನೂರೆಂಟು ವಿಘ್ನ ಎದುರಾಗುತ್ತಲೇ‌ ಇದೆ. ಅಧಿಕಾರಿಗಳು ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ.

ಆದ್ರೇ ಜನರ‌ ಮನೆಗಳ ನಲ್ಲಿಯಲ್ಲಿ ನೀರು ಮಾತ್ರ ಬರುತ್ತಿಲ್ಲ.  ಇದರಿಂದಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ನಗರದ ಕೇಲಗೇರಿ ಭಾಗದ ಆಂಜನೇಯ ನಗರ ಸೇರಿದಂತೆ ಬಹುತೇಕ ಕಡೆಯಲ್ಲಿ ಸುಮಾರು ಹದಿನೈದು ದಿನ ಕಳೆದರೂ ಕುಡಿಯುವ ನೀರು ಬರುತ್ತಿಲ್ಲ. ಜನರು ನಿತ್ಯ ಪಾಲಿಕೆ ಅಧಿಕಾರಿಗಳು ಹಾಗೂ ಕಾರ್ಪೋರೆಟಗಳಿಗೆ  ಶಾಪ ಹಾಕುತ್ತಿದ್ದಾರೆ.

Umesha HS

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

10 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

21 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

29 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

31 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

43 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

52 mins ago