ಧಾರವಾಡದಲ್ಲಿ ಎಂದಿನಂತೆ ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳು ಕರ್ತವ್ಯ ನಿರ್ವಹಣೆ

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ನಾಳೆಯೂ (ಸೆ.29) ಎಂದಿನಂತೆ ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳು ಕರ್ತವ್ಯ ನಿರ್ವಹಿಸುತ್ತವೆ. ನಾಗರಿಕರಿಗೆ ಸಾರಿಗೆ, ಔಷಧಿ ಸೇರಿದಂತೆ ಎಲ್ಲ ಅಗತ್ಯ ಸೇವೆಗಳ ಪೂರೈಕೆಯಲ್ಲಿ ಯಾವುದೇ ಅಡಚನೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ನಾಳೆಯ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಪೊಲೀಸ್ ಕಮೀಷನರ್ ಹಾಗೂ ಎಸ್.ಪಿ. ಅವರ ನೇತೃತ್ವದಲ್ಲಿ ಮುನ್ನೆಚ್ಚರಿಕೆಯಾಗಿ ಅಗತ್ಯ ಸಿಬ್ಬಂದಿ, ಮೀಸಲು ಪೊಲೀಸ್ ಪಡೆ ನಿಯೋಜಿಸಿ, ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಸಾರ್ವಜನಿಕರಿಗೆ ಮತ್ತು ಇತರೆ ತೊಂದರೆಗಳು ಉಂಟಾಗದಂತೆ ಪ್ರತಿಭಟನಾಕಾರರು ಶಾಂತ ರೀತಿಯಲ್ಲಿ ತಮ್ಮ ಪ್ರತಿಭಟನೆ ವ್ಯಕ್ತಪಡಿಸಲು ಸೂಚಿಸಲಾಗಿದೆ. ಪ್ರತಿಭಟನಾಕಾರರು ಸಹ ಶಾಂತ ರೀತಿಯಲ್ಲಿ ಪ್ರತಿಭಟಿಸಿ, ಸಹಕಾರ ನೀಡುವುದಾಗಿ ಹೇಳಿದ್ದಾರೆ. ಸಾರ್ವಜನಿಕರು ಯಾವುದೇ ಗೊಂದಲಗಳಿಗೆ ಒಳಗಾಗದೇ ದಿನನಿತ್ಯದ ಕಾರ್ಯಗಳನ್ನು ಮಾಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ashika S

Recent Posts

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

3 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

15 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

33 mins ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

41 mins ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

1 hour ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

1 hour ago