ದಲಿತರನ್ನು ಬಿಂಬಿಸುವುದು ಕಾಂಗ್ರೆಸ್ ನ ಮೋಸದಾಟ: ಗೋವಿಂದ ಕಾರಜೋಳ

ಹುಬ್ಬಳ್ಳಿ: ಕಾಂಗ್ರೆಸ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಪಿಎಂ ಅಭ್ಯರ್ಥಿ ಬಿಂಬಿಸುವ ಯತ್ನವು ಕಾಂಗ್ರೆಸ್ ನಲ್ಲಿ ಇದೊಂದು ಮೋಸದಾಟ ಅಷ್ಟೇ. ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ನಲ್ಲಿ ಪ್ರಧಾನಿ ಆಗಲ್ಲ. ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲ್ಲ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಇರುವವರಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಉದ್ದೇಶ ಪೂರ್ವಕವಾಗಿಯೇ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಮುನ್ನಲೇ ತರಲಾಗುತ್ತದೆ. ದಲಿತರನ್ನ ಪ್ರಧಾನಿ ಅಭ್ಯರ್ಥಿ ಘೋಷಣೆ ಮಾಡಿದವು. ಆದರೆ ಅಧಿಕಾರಕ್ಕೆ ಬರಲಿಲ್ಲ ಅಂತಾ ಕಾಂಗ್ರೆಸ್ ನವರು ಗೊಬೆ ಕುರಿಸುವ ಹುನ್ನಾರ. ದಲಿತರ ಮೇಲೆ ಕಾಂಗ್ರೆಸ್ ಗೆ ಪ್ರೀತಿ ಇದ್ದರೆ 2013 ರಲ್ಲಿಯೇ ಮಾಡಬೇಕಿತ್ತು.

ಕಾಂಗ್ರೆಸ್ ಸ್ಪಷ್ಟವಾದ ಬಹುಮತ ಬಂದಿತ್ತು. ಕೆಪಿಸಿಸಿ ಅಧ್ಯಕ್ಷರಾಗಿ ಜಿ ಪರಮೇಶ್ವರ ರಾಜ್ಯ ಸುತ್ತಾಡಿ ಪಕ್ಷವನ್ನ ಅಧಿಕಾರಕ್ಕೆ ತಂದರು. ಆದರೆ ಜಿ ಪರಮೇಶ್ವರಗೂ ಏನು ಮಾಡಲಿಲ್ಲ. ಅಂದು ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಬೇಕು ಅಂತಾ ಮಾಡಿದರು. ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಆಂತರಿಕ ಚುನಾವಣೆ ನಡೆಸಿದರು. ಸಿದ್ದರಾಮಯ್ಯಾ ಹಾಗೂ ಮಲ್ಲಿಕಾರ್ಜುನ ಖರ್ಗೆಗೆ ಶಾಸಕರು ಮತ ಚಲಾವಣೆ ಮಾಡಿದರು.

ಸಿದ್ದರಾಮಯ್ಯಾಗೆ ಅಧಿಕ ಮತ ಬಂದವು. ಸಿದ್ದರಾಮಯ್ಯಾ ಸಿಎಂ ಅಭ್ಯರ್ಥಿ ಆಗಿ ಘೋಷಣೆ ಮಾಡಲಾಯಿತು. ನಾವು ಕಾಂಗ್ರೆಸ್ ಆಡಳಿತವನ್ನ ಬಹಳ ದಿನಗಳಿಂದ ನೋಡಿದ್ದೇವೆ. 60 ವರ್ಷಗಳ ಆಡಳಿತ, ಜೊತೆಗೆ ಜವಾಹರಲಾಲ್ ನೆಹರು ಮನೆತನದ 36 ವರ್ಷ ಆಡಳಿತ ಗೊತ್ತು. ಈಗ ಕಾಂಗ್ರೆಸ್ ನರಿಗೆ ದಲಿತರ ಮೇಲೆ ಪ್ರೀತಿ ಉಕ್ಕಿ ಬಂದಿದೆ ಎಂದರು.

Gayathri SG

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

4 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

4 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

4 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

6 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

6 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

6 hours ago