ನಾನು ಸಿಎಂಗೆ ಪತ್ರ ಬರೆದಿದ್ದು ನಿಜ: ಬಸವರಾಜ ರಾಯರೆಡ್ಡಿ

ಧಾರವಾಡ: ನಾನು ಕಾಂಗ್ರೆಸ್ ಮೇಲೆ ಸಿಟ್ಟಾಗಿಲ್ಲ ಎಂದು ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು ಬಿಜೆಪಿ ಸೇರಿದಂತೆ ಎಲ್ಲರೂ ಕರೆಯುತ್ತಿರುತ್ತಾರೆ. ನಾನು ಐಡಿಯಾಲಜಿ ಇಟ್ಟುಕೊಂಡು ರಾಜಕೀಯ ಮಾಡಿದವನು. ಸಿದ್ದರಾಮಯ್ಯ ಒಳ್ಳೆಯ ಸಿಎಂ. ವೈಯಕ್ತಿಕವಾಗಿ ಸಿದ್ದರಾಮಯ್ಯ ನನಗೆ ಬಹಳ ಬೇಕಾದವರು. ಅವರೊಬ್ಬ ಒಳ್ಳೆಯ ಜನನಾಯಕ. ಸಿದ್ದರಾಮಯ್ಯನಂತಹ ರಾಜಕಾರಣಿಗಳು ಸಿಗುವುದಿಲ್ಲ. ನಾವೆಲ್ಲ ಒಂದೇ ಕಾಲದಲ್ಲಿ ರಾಜಕೀಯಕ್ಕೆ ಬಂದವರು ಎಂದರು.

ಕೊಪ್ಪಳದ ಕೆಲ ಅಭಿವೃದ್ಧಿ ವಿಚಾರವಾಗಿ ಇಂದು ಇಬ್ಬರು ಸಚಿವರನ್ನು ನಾನೇ ನನ್ನ ಫಾರ್ಮ್‌ಹೌಸ್‌ಗೆ ಕರೆದಿದ್ದೆ. ನನ್ನ ಕ್ಷೇತ್ರಕ್ಕೆ ಇಬ್ಬರನ್ನೂ ಕರೆದುಕೊಂಡು ಹೋಗುತ್ತೇನೆ. ಹೀಗಾಗಿ ನನ್ನ ಫಾರ್ಮ್‌ಹೌಸ್‌ನಲ್ಲಿ ಉಳಿದುಕೊಂಡಿದ್ದರು. ಇದರಲ್ಲಿ ಯಾವುದೇ ರಾಜಕೀಯ ಇಲ್ಲ.ರಾಜಕೀಯ ಮಾಡುವಾಗ ಖಂಡಿತ ಮಾಡೇ ಮಾಡುತ್ತೇವೆ. ಅಭಿವೃದ್ಧಿ ದೃಷ್ಟಿಯಿಂದ ನಾವು ಇಲ್ಲಿ ಸೇರಿದ್ದೇವೆ ಎಂದರು.

ಕಾಂಗ್ರೆಸ್‌ನಲ್ಲಿ ಯಾರಿಗೂ ಅಸಮಾಧಾನ ಇಲ್ಲ. ಯಾರ್‌ಯಾರಿಗೋ ಲಕ್ ಇರುತ್ತದೆ. ಅದಕ್ಕೆ ಮೋದಿ ಅವರನ್ನು ಉದಾಹರಿಸಬಹುದು. ಅಡ್ವಾಣಿ ಪಿಎಂ ಆಗಬೇಕಿತ್ತು. ಅದು ಮಿಸ್ ಆಯ್ತು. ಮಲ್ಲಿಕಾರ್ಜುನ ಖರ್ಗೆ ಪಿಎಂ ಆಗಬೇಕಿತ್ತು. ಅದೂ ಸಹ ಮಿಸ್ ಆಗಿದೆ. ಹಿರಿಯ, ಕಿರಿಯ ಅಂತೇನಿಲ್ಲ. ಲಕ್ ಇದ್ದಾಗ ಯಾರು ಬೇಕಾದರೂ ಏನಾದರೂ ಆಗಬಹುದು. ನನಗೆ ಸಚಿವ ಸ್ಥಾನ ಸಿಗದೇ ಇರುವುದಕ್ಕೆ ಅಸಮಾಧಾನ ಇಲ್ಲ. ಆದರೆ, ನಮ್ಮನ್ನು ಉಪಯೋಗಿಸಿಕೊಳ್ಳುತ್ತಿಲ್ಲವಲ್ಲ ಎಂಬ ಬೇಸರ ಇದೆ ಅಷ್ಟೆ ಎಂದರು.

ಸಚಿವ ಎಂ.ಬಿ.ಪಾಟೀಲ ಮೇಲೆ ಬೇಸರ ಹೊರ ಹಾಕಿದ ರಾಯರೆಡ್ಡಿ, ಗದಗ ರೈಲ್ವೆ ವಾಡೆಯಲ್ಲಿಯೂ ಒಂದು ಸಭೆ ಕರೆದಿದ್ದೇನೆ. ಅದರ ಬಗ್ಗೆ ಸಿಎಂಗೂ ಪತ್ರ ಬರೆದಿದ್ದಾರೆ. ಇದಕ್ಕಾಗಿ ಎರಡೆರಡು ಸಲ ಎಂ.ಬಿ.ಪಾಟೀಲರಿಗೆ ನೆನಪು ಮಾಡಿದ್ದೇನೆ. ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಯಾಕಂದ್ರೆ ಅವರು ಬ್ಯುಸಿ ಮ್ಯಾನ್ ಎಂದರು. ಅದರ ಬಗ್ಗೆ ಹೇಳಿಕೊಂಡರೆ ಬೇರೆ ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಾನು ಸುಮ್ಮನಾಗಿದ್ದೇನೆ ಎಂದರು.

ನಾನು ಸಿಎಂಗೆ ಪತ್ರ ಬರೆದಿದ್ದು ನಿಜ. ಕೊಪ್ಪಳ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ. ಈ ಸಮಯದಲ್ಲಿ ವಿದ್ಯುತ್ ಸರಿಯಾಗಿ ಸಿಗುತ್ತಿಲ್ಲ. ಟ್ರಾನ್ಸ್‌ ಫಾರ್ಮರ್‌ಗಳು ಬರ್ನ್ ಆಗುತ್ತಿವೆ. ಆದರೆ, ಸರಿಯಾಗಿ ಸ್ಪಂದನೆ ಸಿಗುತ್ತಿಲ್ಲ. ಕಲಬುರ್ಗಿ ಜೆಸ್ಕಾಂ ವ್ಯಾಪ್ತಿಗೆ ನಮ್ಮ ಜಿಲ್ಲೆ ಬರುತ್ತದೆ. ಆದರೆ, ಅಧಿಕಾರಿಗಳು ಜಿಲ್ಲೆಗೆ ಬರುತ್ತಿಲ್ಲ. ಹೀಗಾಗಿ, ಸಿಎಂಗೆ ಪತ್ರ ಬರೆದಿದ್ದೇನೆ. ಜೆಸ್ಕಾಂ ಎಂಡಿಗಳು ವಿಸಿಟ್‌ ಮಾಡುತ್ತಿಲ್ಲ. ಸಿಎಂ ಹಣಕಾಸು ಖಾತೆ ಹೊಂದಿರುವುದರಿಂದ ಸಿಎಂಗೆ ಪತ್ರ ಬರೆದಿದ್ದೆ. ಜನರಿಗೆ ಗೊತ್ತಾಗಲಿ ಅಂತಾ ಆ ಪತ್ರವನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದೆ. ನಾಳೆ ಸೆಪ್ಟೆಂಬರ್ 5 ರಂದು ಇಂಧನ ಸಚಿವರು ಸಭೆ ಕರೆದಿದ್ದಾರೆ. ನನ್ನ ಪತ್ರದಿಂದ ಜೆಸ್ಕಾಂ ಸಮಸ್ಯೆ ಪರಿಹಾರ ಆಗುತ್ತದೆ ಎಂಬ ಭರವಸೆ ವ್ಯಕ್ತಪಡಿಸಿದರು.

Gayathri SG

Recent Posts

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

4 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

6 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

26 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

40 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

56 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

60 mins ago