ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಏಪ್ರಿಲ್ 21ರಂದು ಹುಬ್ಬಳ್ಳಿ ಪ್ರವಾಸ

ಹುಬ್ಬಳ್ಳಿ :  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಏಪ್ರಿಲ್ 21ರಂದು ಹುಬ್ಬಳ್ಳಿ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರ ಮಧ್ಯಾಹ್ನ 2 ಗಂಟೆಗೆ ವಾಣಿಜ್ಯ ನಗರಿಗೆ ಧಾವಿಸಲಿರುವ ನಡ್ಡಾ, ರಾತ್ರಿ 10 ಗಂಟೆವರೆಗೂ ಬಿಡುವಿಲ್ಲದಂತೆ ವಿವಿಧ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಏ.21 ನಾಳೆ ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಜೆ.ಪಿ.ನಡ್ಡಾ, ರಸ್ತೆ ಮಾರ್ಗವಾಗಿ ಸಂಚರಿಸಿ ಹುಬ್ಬಳ್ಳಿಯ ಖಾಸಗಿ ಹೊಟೇಲ್‌ಗೆ ತೆರಳಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಡೆನಿಸನ್ಸ್ ಹೋಟೆಲ್ ನಲ್ಲಿ ಪಕ್ಷದ ವಿವಿಧ ಸಮುದಾಯದ ಮುಖಂಡರ ಸಭೆ ನಡೆಸಲಿದ್ದಾರೆ. ಬಳಿಕ 5 ಗಂಟೆಗೆ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇಲ್ಲಿನ ವಿದ್ಯಾನಗರದ ಸಾಕ್ರೆ ಸ್ಕೂಲ್ ಮೈದಾನದಲ್ಲಿ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಸಭೆ ಏರ್ಪಡಿಸಿದ್ದು, ನಡ್ಡಾ, ಬಿಜೆಪಿ ಅಭ್ಯರ್ಥಿ, ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಪರ ಮತಯಾಚನೆ ನಡೆಸಲಿದ್ದಾರೆ. ಈ ಸಾರ್ವಜನಿಕ ಸಭೆ ಬಳಿಕ 7.20ಕ್ಕೆ ಡೆನಿಸನ್ಸ್ ಹೋಟೆಲ್ ಗೆ ಮರಳಲಿದ್ದು, 9 ಗಂಟೆಗೆ ಪಕ್ಷದ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ.

Nisarga K

Recent Posts

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

20 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

47 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

55 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

55 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

1 hour ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

1 hour ago