ಜೈನ ಮುನಿ ಹತ್ಯೆ ಪ್ರಕರಣ ಸಿಬಿಐ ಗೆ ವಹಿಸಲ್ಲ ಎಂದ ಡಾ. ಜಿ ಪರಮೇಶ್ವರ್‌

ಹುಬ್ಬಳ್ಳಿ: ಜೈನ್ ಮುನಿಗಳ ಹತ್ಯೆಯಂತಹ ಘಟನೆ ನಡೆದಾಗ ಯಾರು ಕೂಡ ತಾರತಮ್ಯ ಮಾಡುವುದಕ್ಕೆ ಆಗುವುದಿಲ್ಲ. ಈ ಪ್ರಕರಣವನ್ನ ಸಿಬಿಐ ಅಥವಾ ಯಾವುದಕ್ಕೂ ಕೊಡುವ ಅಗತ್ಯ ಇಲ್ಲ. ನಮ್ಮ ಪೋಲಿಸರು ಸಮರ್ಥರಿದ್ದಾರೆ ಎಂದು ಗೃಹ ಸಚಿ ಡಾ. ಜಿ ಪರಮೇಶ್ವರ್‌ ಹೇಳಿದ್ದಾರೆ.

ಹುಬ್ಬಳ್ಳಿ ತಾಲೂಕಿನ ವರೂರಿನಲ್ಲಿ ಜೈನಮುನಿ ಗುಣಧರನಂದಿ‌ ಮಹಾರಾಜರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಹತ್ಯೆಯ ಅಪರಾಧಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವ ಕೆಲಸ ಪೊಲೀಸರು ಮಾಡುತ್ತಾರೆ. ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಹತ್ಯ ತನಿಖೆಯಲ್ಲಿ ತಾರತಮ್ಯದ ಆರೋಪ ವಿಚಾರ ನನಗೂ ಬೇಜಾರು ತಂದಿದ್ದು, ಅದರಲ್ಲಿ ತಾರತಮ್ಯದ ಪ್ರಶ್ನೆ ಬರುವುದಿಲ್ಲ. ಘಟನೆ ನಡೆದ ಮೇಲೆ ಪೊಲೀಸರಿಗೆ ವಿಚಾರ ಗೊತ್ತಾಗಿ ಕಂಪ್ಲೇಂಟ್ ಆದ ಮೇಲೆ ತಕ್ಷಣ ಕಾರ್ಯಪ್ರವೃತ್ತರಾಗಿದ್ದರೂ, ಬೋರ್ವೆಲ್ ನಲ್ಲಿ ಹಾಕಿದಂತ ದೇಹವನ್ನು ತೆಗೆಸಿ ಕ್ರಮ ತೆಗೆದುಕೊಂಡಿದ್ದಾರೆ ಇದು ಅತ್ಯಂತ ವೇಗವಾಗಿ ನಡೆದಿದ್ದು, ನಮ್ಮ ಇಲಾಖೆಗೆ ಅಭಿನಂದನೆ ಹೇಳ್ತೇನೆ ಅವರು ಶೀಘ್ರವಾಗಿ ಮಾಡಿದ್ದಾರೆ.

Ashitha S

Recent Posts

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

8 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

8 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

23 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

29 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

42 mins ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

1 hour ago