News Karnataka Kannada
Monday, April 22 2024
Cricket
ಹುಬ್ಬಳ್ಳಿ-ಧಾರವಾಡ

ಜೈನ್ ಮುನಿಗಳಿಗೆ ರಕ್ಷಣೆಯೇ ಇಲ್ಲ: ನ್ಯಾಯ ಸಿಗುವವರೆಗೂ ಸಲ್ಲೇಖನ ವೃತವೆಂದು ಕಣ್ಣೀರು

Jain munis have no protection: Sallekhana vrata tears till justice is done
Photo Credit : News Kannada

ಹುಬ್ಬಳ್ಳಿ: ಸಮಾಜದಲ್ಲಿ ಶಾಂತಿಮಂತ್ರದ ಮೂಲಕ ಅಹಿಂಸಾ ಸಿದ್ಧಾಂತವನ್ನು ಪ್ರತಿಪಾದಿಸುವ ಜೈನ ಮುನಿಯನ್ನು ಕೊಲೆ ಮಾಡಿರುವುದು ನಿಜಕ್ಕೂ ಖಂಡನೀಯವಾಗಿದೆ. ಹಣದ ವಿಷಯಕ್ಕೆ ಕೊಲೆ ಮಾಡಿರುವುದು ವಿಷಾದಕರ ಸಂಗತಿಯಾಗಿದ್ದು, ಜೈನ ಮುನಿಗಳಿಗೆ ರಕ್ಷಣೆಯೇ ಇಲ್ಲವಾಗಿದ್ದು, ನ್ಯಾಯ ಸಿಗುವವರೆಗೂ ಊಟ, ಉಪಹಾರ ಬಿಟ್ಟು ಅಮರಣ ಉಪವಾಸ ಮಾಡುವುದಾಗಿ ಅಚಾರ್ಯ ಗುಣಧರನಂದಿ ಮಹರಾಜರು ಹೇಳಿದರು.

ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹಿರೆಕೋಡಿಯ ಕಾಮಕುಮಾರ ನಂದಿ ಮಹಾರಾಜ ಸ್ವಾಮೀಜಿ ಹತ್ಯೆ ಪ್ರಕರಣ ನಿಜಕ್ಕೂ ಜೈನ ಸಮಾಜಕ್ಕೆ ಹಾಗೂ ಜೈನ್ ಮುನಿಗಳಿಗೆ ಆತಂಕವನ್ನುಂಟು ಮಾಡಿದೆ ಎಂದರು.

ಶಾಂತಿ ಪ್ರಿಯ ಸಮಾಜದ ಸ್ವಾಮೀಜಿಯ ಬರ್ಬರ ಹತ್ಯೆ ತೀವ್ರ ನೋವು ತಂದಿದೆ. ಸಿಎಂ ಇದುವರೆಗೂ ಸಂತಾಪ ಸೂಚಿಸದಿರುವುದು ಆಘಾತವಾಗಿದೆ. ಪೊಲೀಸರು ಸೂಕ್ತ ತನಿಖೆ ನಡೆಸಬೇಕು‌. ಸರ್ಕಾರಕ್ಕೆ ನಮ್ಮಂತ ಅಲ್ಪಸಂಖ್ಯಾತರು ಬೇಡವಾಗಿದೆ. ಜೈನ ಮುನಿಗಳಿಗೆ ಸೂಕ್ತ ರಕ್ಷಣೆ ಕೊಡಬೇಕು, ಕೊಲೆಗಡುಕರಿಗೆ ಶಿಕ್ಷೆ ಆಗಬೇಕು ಎಂದು ಗಳಗಳನೆ ಕಣ್ಣೀರು ಸುರಿಸಿದ ಜೈನಮುನಿ ಗುಣಧರನಂದಿ ಮಹಾರಾಜರು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಲಿಖಿತ ಭರವಸೆ ಕೊಡುವವರೆಗೆ ಅನ್ನಾಹಾರ ತ್ಯಾಗ ಮಾಡುತ್ತೇನೆ. ಪ್ರಾಣ ಹೋಗುವವರೆಗೆ ಸಲ್ಲೇಖ‌ನ ಮಾಡುತ್ತೇನೆ ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು