ಕಲಘಟಗಿ: ಗ್ರಾಮ ಪಂಚಾಯತಿ ಸದಸ್ಯನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪನವರ ಕೊಲೆಯಾದ ವ್ಯಕ್ತಿಯಾಗಿದ್ದು, ಆಸ್ತಿ ವಿಚಾರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಕಲಘಟಗಿ ಪೊಲೀಸರ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.