ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ಖಂಡಿಸಿ ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿವಿಧ ವಾಣಿಜ್ಯೋದ್ಯಮಿಗಳು ಬಂದ್ ಗೆ ಬೆಂಬಲ ನೀಡಿದ್ದು, ಧಾರವಾಡ ಜಿಲ್ಲೆಯ ಬಹುತೇಕ ಉದ್ಯಮ ಸ್ತಬ್ಧವಾಗಿವೆ.
ಕೈಗಾರಿಕೆ, ಟ್ರಾನ್ಸ್ ಪೋರ್ಟ್, ಆಟೋಮೊಬೈಲ್, ಜವಳಿ ವ್ಯಾಪಾರಸ್ಥರು ಸೇರಿದಂತೆ ವಿವಿಧ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದ್ದು, ಕೈಗಾರಿಕೆಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಮುಂದಾಗಲಿರೋ ಕೈಗಾರಿಕೋದ್ಯಮಿಗಳು ಸರ್ಕಾರ ಹಾಗೂ ಕೆ.ಇ.ಆರ್.ಸಿ ಗೆ ಬಿಸಿ ಮುಟ್ಟಿಸಲು ಮುಂದಾಗಿವೆ.
ಇನ್ನೂ ತುರ್ತು ಸೇವೆ ಹಾಗೂ ಸಾರಿಗೆ ವ್ಯವಸ್ಥೆ ಹೊರತುಪಡಿಸಿ ವ್ಯಾಪಾರ ವಹಿವಾಟು ಎಲ್ಲವೂ ಬಂದ್ ಆಗಿದ್ದು, ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಲು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸೇರಿದಂತೆ ವಿವಿಧ ಕೈಗಾರಿಕೋದ್ಯಮಿಗಳು ಮುಂದಾಗಿದ್ದಾರೆ.
ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಕಚೇರಿಯಿಂದ ತಹಶೀಲ್ದಾರ್ ಕಚೇರಿವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕೈಗಾರಿಕೋದ್ಯಮಿಗಳು ಮುಂದಾಗಿದ್ದಾರೆ.