ಹುಬ್ಬಳ್ಳಿ : ಆಟೋದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಚಿನ್ನಾಭರಣವಿದ್ದ ಬ್ಯಾಗ್ ಬಿಟ್ಟು ಹೋಗಿದ್ದರು. ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿಯ ಗೋಕುಲ್ ರೋಡ್ ಠಾಣೆಯ ಪೊಲೀಸರು ಚಿನ್ನಾಭರಣವಿದ್ದ ಬ್ಯಾಗ್ ಮರಳಿಸಿದ್ದಾರೆ.
ನಗರದ ಗೋಕುಲ್ ರಸ್ತೆಯ ಅಕ್ಷಯ ಪಾರ್ಕ್ ಬಳಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿತ್ತು. ಬ್ಯಾಗ್ ಕಳೆದುಕೊಂಡವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಬಳಿಕ, ಪೊಲೀಸರು ಆಟೋ ಚಾಲಕನ ಪತ್ತೆಗೆ ಬಲೆ ಬೀಸಿ ಆಟೋ ಚಾಲಕನನ್ನು ಕರೆತಂದ ವಿಚಾರಣೆ ನಡೆಸಿ ಬ್ಯಾಗ್ ತಮ್ಮ ವಶಕ್ಕೆ ಪಡೆದಿದ್ದಾರೆ.
ಬ್ಯಾಗ್ ನಲ್ಲಿದ್ದ ಬಂಗಾರದ ನಕ್ಲೀಸ್ ನನ್ನು ಸಂಬಂಧಿಸಿದವರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದು, ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಹಾಗೂ ಪೊಲೀಸ್ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.