ಅಖಂಡೇಶ್ವರ ಜಾತ್ರೆಗೆ ತೆರಳಿದ್ದ ಯುವತಿಯನ್ನು ಅಪಹರಿಸಿದ ಮುಸ್ಲಿಂ ಯುವಕ

ಹಬ್ಬಳ್ಳಿ: ನೇಹಾ ಕೊಲೆ ಕೇಸ್‌ ಬೆನ್ನಲ್ಲೆ ಅದೇ ಜಿಲ್ಲೆಯಲ್ಲಿ ಮತ್ತೋರ್ವ ಯುವತಿ ಕಾಣೆಯಾಗಿದ್ದು ಮುಸ್ಲಿಂ ಯುವಕ ಆಕೆಯನ್ನು ಅಪಹರಿಸಿರುವುದಾಗಿ ಆರೋಪ ಕೇಳಿ ಬಂದಿದೆ. ಮಗಳ ಅಪಹರಣವಾಗಿದೆ ಎಂದು ತಂದೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.
ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಳಸಾ ಗ್ರಾಮದ ನಿವಾಸಿ ಅಕ್ಷತಾ ಅತಿತಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಏಪ್ರಿಲ್ 18 ರಂದು ಯುವತಿಯನ್ನು ಯಾವುದೋ ದುರುದ್ದೇಶದಿಂದ ಅಪಹರಿಸಿದ್ದಾನೆಂದು ಅಕ್ಷತಾ ತಂದೆ ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಾಮದ ಸುಬಾನಿ ದೊಡ್ಡಮನಿ ಎಂಬಾತನ ವಿರುದ್ಧ ದೂರು ಕೊಟ್ಟಿದ್ದಾರೆ.ನಾಲ್ಕೈದು ವರ್ಷಗಳಿಂದ ಈ ಸುಬಾನಿ ಯುವತಿಯನ್ನು ಹಿಂಬಾಲಿಸುವುದು, ಪೀಡಿಸುವುದು, ದಾರಿಯಲ್ಲಿ ಬರುವಾಗ ಅಡ್ಡಗಟ್ಟುವುದು ಮಾಡುತ್ತಿದ್ದ. ಈ ಬಗ್ಗೆ ಅಕ್ಷತಾ ತನ್ನ ತಂದೆ ಬಳಿ ಹೇಳಿಕೊಂಡಿದ್ದಳು.

ಹೀಗಾಗಿ ಸುಬಾನಿ ಮತ್ತು ಕುಟುಂಬಸ್ಥರನ್ನು ಕರೆಸಿ ಬುದ್ಧಿವಾದ ಹೇಳಿ, ಮತ್ತೆ ಮಗಳಿಗೆ ತೊಂದರೆ ಕೊಡದಂತೆ ಎಚ್ಚರಿಕೆ ಕೊಟ್ಟಿದ್ದರು. ಆ ನಂತರವೂ ಈತನ ಕಾಟ ಮುಂದುವರಿದಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕಳಸ ಗ್ರಾಮದ ಅಖಂಡೇಶ್ವರ ಜಾತ್ರೆಗೆ ಹೋಗಿ ಬರುವುದಾಗಿ ಬೆಳಗ್ಗೆ 5 ಗಂಟೆಗೆ ಮನೆಯಿಂದ ಹೊರಹೋದವಳು ನಾಪತ್ತೆಯಾಗಿದ್ದಾಳೆ. ಅಕ್ಷತಾಳನ್ನು ಸುಬಾನಿ ಮಾಬುಸಾಬ್ ದೊಡ್ಡಮನಿ ಅಪಹರಿಸಿದ್ದಾನೆಂದು ಉಲ್ಲೇಖಿಸಿದ್ದಾರೆ

Nisarga K

Recent Posts

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

15 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

24 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

24 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

39 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

44 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

57 mins ago