ನೈರುತ್ಯ ರೈಲ್ವೆಯ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಕೆ.ಎಸ್. ಜೈನ್ ಅಧಿಕಾರ ಸ್ವೀಕಾರ

ಹುಬ್ಬಳ್ಳಿ: ನೈರುತ್ಯ ರೈಲ್ವೆಯ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಕೆ.ಎಸ್. ಜೈನ್ ಅವರು ಅಧಿಕಾರ ವಹಿಸಿಕೊಂಡರು. ಕೆ.ಎಸ್. ಜೈನ್ ಅವರು ರೂರ್ಕಿ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿಯನ್ನು 1987 ರಲ್ಲಿ ಪಡೆದಿದ್ದಾರೆ. ಇಂಡಿಯನ್ ರೈಲ್ವೆ ಸರ್ವಿಸ್ ಆಫ್ ಮೆಕ್ಯಾನಿಕಲ್ ಎಂಜಿನಿಯರಿಂಗ್ (IRSME) 1988 ರ ಬ್ಯಾಚ್ ನ ಅಧಿಕಾರಿಯಾಗಿ ರೈಲ್ವೆಯಲ್ಲಿ ಸೇರಿದರು.

ಜನವರಿ 9, 1991 ರಂದು ಕೆ.ಎಸ್.ಜೈನ್ ಅವರು ಉತ್ತರ ರೈಲ್ವೆಯಲ್ಲಿ ಸಹಾಯಕ ವಿಭಾಗೀಯ ಮೆಕ್ಯಾನಿಕಲ್‌ ಎಂಜಿನಿಯರ್ / ಸಿ & ಡಬ್ಲ್ಯೂ / ಫಿರೋಜ್ಜುರದಲ್ಲಿ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದರು, ಉತ್ತರ ರೈಲ್ವೆ, DMW, NER, RDSO, & ICF ದಲ್ಲಿ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪರಿಣತಿಯನ್ನು ಪ್ರದರ್ಶಿಸಿಸಿ, ಮೆಕ್ಯಾನಿಕಲ್‌ ವಿಭಾಗಕ್ಕೆ ಗಮನಾರ್ಹ ಸೇವೆಯನ್ನು ಸಲ್ಲಿಸಿದ್ದಾರೆ.

ತಿರುವನಂತಪುರಂ ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮತ್ತು ಅಲಿಪುರದ್ವಾರ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ದಕ್ಷಿಣ ಮಧ್ಯ ರೈಲ್ವೆಯಲ್ಲಿ CWE ಆಗಿ ಸೇರಿದಾಗ ಅವರ ಸಮರ್ಪಣೆ ಮತ್ತು ವಿಶಿಷ್ಟ ವಿಧಾನವು ಸ್ಪಷ್ಟವಾಯಿತು, ថ 1, 2023 80 PCME ನೇಮಕಗೊಂಡರು.

ನೈರುತ್ಯ ರೈಲ್ವೆಯ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮುನ್ನ, ಕೆ.ಎಸ್.ಜೈನ್‌ ಅವರು ದಕ್ಷಿಣ ಮಧ್ಯ ರೈಲ್ವೆಯಲ್ಲಿ ಪ್ರಧಾನ ಮುಖ್ಯ ಮೆಕ್ಯಾನಿಕಲ್‌ ಎಂಜಿನಿಯ‌ರ್ ಸ್ಥಾನವನ್ನು ಹೊಂದಿದ್ದರು. ಅವರ ವೃತ್ತಿಜೀವನದುದ್ದಕ್ಕೂ ನಿರಂತರವಾಗಿ ಅನನ್ಯ ಸೇವೆಯನ್ನು ಸಲ್ಲಿಸಿದ್ದಾರೆ.

Gayathri SG

Recent Posts

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

6 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

25 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

26 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

41 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

43 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

1 hour ago