ಮಹದಾಯಿ ಯೋಜನೆ: ವಿಭಿನ್ನವಾಗಿ ಚನ್ನಮ್ಮ ಸರ್ಕಲ್ ಬಳಿ ರೈತರ ಹೋರಾಟ

ಹುಬ್ಬಳ್ಳಿ: ಕಳಸಾ ಬಂಡೂರಿ ನಾಲಾ ಮಹದಾಯಿಗಾಗಿ ಉತ್ತರ ಕರ್ನಾಟಕದ ರೈತರು ಸಾಕಷ್ಟು ಹೋರಾಟ ಮಾಡ್ತಿದ್ದಾರೆ. ಕೇಂದ್ರ ಸರ್ಕಾರ ನಾಲಾ ಯೋಜನೆ ಮಾಡಲು ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ, ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ, ಮಹದಾಯಿ ಕಳಸ ಬಂಡೂರಿ ಹೋರಾಟ ಸಮನ್ವಯ ಸಮಿತಿ ನೇತೃತ್ವದಲ್ಲಿ, ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ, ತಲೆಯ ಮೇಲೆ ಖಾಲಿ ಕೂಡ ಇಟ್ಟುಕೊಂಡು ವಿಭಿನ್ನವಾಗಿ ಪ್ರತಿಭಟನೆ ಮಾಡಿದರು.

ರೈತ ಪರ ಸಂಘಟನೆಗಳು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ, ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆಗಿಳಿದ ಮಹದಾಯಿ ಹೋರಾಟಗಾರರು, ಮಹದಾಯಿ ಮತ್ತು ಕಳಸಾ – ಬಂಡೂರಿ ಯೋಜನೆ ಜಾರಿಗೆ ಅನಗತ್ಯ ವಿಳಂಬವಾಗಿದ್ದು, ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಹದಾಯಿ ವಿಷಯ ಚರ್ಚಿಸುವಂತೆ ಆಗ್ರಹಿಸಿದರು.

ಕೂಡಲೇ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು, ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮಹದಾಯಿ ವಿಚಾರ ಚರ್ಚೆ ಮಾಡಬೇಕು. ಶೀಘ್ರವೇ ಮಹದಾಯಿ ಯೋಜನೆ ಜಾರಿಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

45 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

59 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

1 hour ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

1 hour ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago