ದಾವಣಗೆರೆ: ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಕಿತ್ತೂರು ಗ್ರಾಮದ ನಿವಾಸಿ ಮೂರ್ತಿ (40) ಮೃತ ದುರ್ದೈವಿ.
ಎಂದಿನಂತೆ ಮೂರ್ತಿ ಮೀನು ಹಿಡಿಯಲು ತೆಪ್ಪದಲ್ಲಿ ಹೋಗಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ತೆಪ್ಪ ಮಗುಚಿ ಬಿದ್ದು ಮೀನಿಗೆ ಹಾಕಿದ್ದ ಬಲೆ ಕಾಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.
ಸ್ಥಳೀಯರು ಮೂರ್ತಿ ಅವರ ಮೃತದೇಹವನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಬಿಳಚೋಡು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.