News Karnataka Kannada
Sunday, April 28 2024
ಹುಬ್ಬಳ್ಳಿ-ಧಾರವಾಡ

ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮರಿತಿಬ್ಬೇಗೌಡ

ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿರುವ ಸಭಾಪತಿ ಹೊರಟ್ಟಿ ನಿವಾಸದಲ್ಲಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
Photo Credit : NewsKarnataka

ಹುಬ್ಬಳ್ಳಿ: ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿರುವ ಸಭಾಪತಿ ಹೊರಟ್ಟಿ ನಿವಾಸದಲ್ಲಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಮರಿತಿಬ್ಬೇಗೌಡರು ಸ್ವ ಇಚ್ಛೆಯಿಂದ ರಾಜೀನಾಮೆ ಕೊಡುತ್ತಿರುವುದಾಗಿ ಹೊರಟ್ಟಿ ತಿಳಿಸಿದ್ದಾರೆ. ಹೀಗಾಗಿ ರಾಜೀನಾಮೆ ಅಂಗೀಕಾರ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ರಾಜೀನಾಮೆ ಸಲ್ಲಿಕೆ ಬಳಿಕ ಮಾತನಾಡಿದ ಮರಿತಿಬ್ಬೇಗೌಡ, ಮುಂದಿನ ಅವಧಿಗೆ ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ. ಅಲ್ಲದೆ, ಹೆಚ್​ಡಿ ದೇವೇಗೌಡ, ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ ಮರಿತಿಬ್ಬೇಗೌಡ ಅವರು ಪಕ್ಷಕ್ಕೂ ಗುಡ್​ಬೈ ಹೇಳಿದ್ದಾರೆ.

2000 ಜೂನ್​ನಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ವಿಧಾನ ಪರಿಷತ್​ಗೆ ಆಯ್ಕೆಯಾಗಿದ್ದೆ. ಎರಡನೇ ಬಾರಿ ಪಕ್ಷೇತರವಾಗಿ ಗೆದ್ದು ಬಂದಿದ್ದೆ. ಮೂರು ನಾಲ್ಕನೇ ಬಾರಿ ನಾನು ಜನತಾದಳದಿಂದ ಗೆದ್ದು ಬಂದಿದ್ದೇನೆ. ಪಕ್ಷದ ನಿಷ್ಠಾವಂತ ಸದಸ್ಯನಾಗಿ ಕೆಲಸ ಮಾಡಿದ್ದೇನೆ ಎಂದರು.

ಕೆಲವು ವಯಕ್ತಿಕ ಕಾರಣದಿಂದ ನಾನು ರಾಜೀನಾಮೆ ನೀಡುತ್ತಿದ್ದೇನೆ. ನಾನು ಜನತಾ ದಳದಿಂದ ಎರಡು ಬಾರಿ ಟಿಕೆಟ್ ಪಡೆದಿದ್ದೆ. ಎರಡು ಬಾರಿ ಜನತಾದಳದಿಂದ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಗೆದ್ದಿದೆ. ಈ ಅವಧಿಯಲ್ಲಿ ವಿಧಾನ ಪರಿಷತ್ ಉಪ ಸಭಾಪತಿ ಆಗಿದ್ದೆ. ನನ್ನ ರಾಜಕೀಯ ಪ್ರಾರಂಭವಾಗಿದ್ದು ಜನತಾ ದಳದಿಂದ. ಕೆಲವು ಸಲ ವಿಧಾನ ಪರಿಷತ್ ಹಾಗೂ ವಿಧಾನಸಭೆ ಟಿಕೆಟ್ ನನಗೆ ಸಿಗಲಿಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು