ಹುಬ್ಬಳ್ಳಿ: ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಹಾಕಿದ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಭಾವಚಿತ್ರದ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದುಹಾಕಿದ್ದಾರೆ.
ಮೊದಲೇ ಹುಬ್ಬಳ್ಳಿಯಲ್ಲಿ ಬಿಜೆಪಿ, ಕಾಂಗ್ರೆಸ್ ನಡುವೆ ಜಟಾಪಟಿ ಜೋರಾಗಿದೆ. ಈ ಮಧ್ಯೆ ಯಾರೋ ಕಿಡಿಗೇಡಿಗಳು ಕಾಂಗ್ರೆಸ್ ಕಚೇರಿಯ ಮುಂದೆ ಹಾಕಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಅವರ ಭಾವಚಿತ್ರದ ಬ್ಯಾನರ್ಗಳನ್ನು ಯಾರೋ ಕಿಡಿಗೇಡಿಗಳು ಹರಿದು ಅವಾಂತರ ಸೃಷ್ಟಿ ಮಾಡಿದ್ದಾರೆ. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಧಾರವಾಡ ಜಿಲ್ಲಾ ಕಾಂಗ್ರೆಸ್ ಮುಂದಾಗಿದೆ.