ಹುಬ್ಬಳ್ಳಿ: ರಾಜಕಾರಣ ನಿಂತ ನೀರಲ್ಲ, ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಸರ್ಕಾರದಿಂದ ದುರಾಡಳಿತ ಹೆಚ್ಚಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತ, ಮತ್ತೊಂದು ಕಡೆ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ. ಒಂದು ಹಿಡಿ ಮಣ್ಣನ್ನು ರಸ್ತೆಗೆ ಹಾಕಲಾರದ ಸ್ಥಿತಿ ನಿರ್ಮಾಣ ಮಾಡಿದ್ದಾರೆ. ಈ ರೀತಿ ಆದರೆ ಇಡೀ ರಾಜ್ಯ ಅಧೋಗತಿಗೆ ಹೋಗುತ್ತದೆ. ಇದನ್ನು ನಿಲ್ಲಿಸುವ ಉದ್ದೇಶದಿಂದ ನಾವಂತೂ ಹೋರಾಟ ಮಾಡುತ್ತಿದ್ದೇವೆ ಎಂದರು.