ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿಗಾವಹಿಸಿ: ಭೂಷಣ ಪಾಟೀಲ

ಧಾರವಾಡ : ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಚುನಾವಣಾ ಅಭ್ಯರ್ಥಿಗಳ ಖರ್ಚುವೆಚ್ಚದ ಮೇಲೆ ಪ್ರತಿ ದಿನವೂ ತೀವ್ರ ನಿಗಾವಹಿಸುವಂತೆ ಚುನಾವಣಾ ವೆಚ್ಚ ವೀಕ್ಷಕರಾದ ಭೂಷಣ ಪಾಟೀಲ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಚುನಾವಣಾ ಖರ್ಚು ವೆಚ್ಚ ನಿಗಾ ತಂಡದ ಅಧಿಕಾರಿಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ತಮಗೆ ಕುಂದಗೋಳ, ಹುಬ್ಬಳ್ಳಿ ಪಶ್ಚಿಮ, ಕಲಘಟಗಿ, ಹಾಗೂ ಶಿಗ್ಗಾಂವ ಕ್ಷೇತ್ರಗಳ ವ್ಯಾಪ್ತಿಗಳು ಒಳಪಟ್ಟಿದ್ದು ಸಂಬಂಧಿಸಿದ ಅಧಿಕಾರಿಗಳು ಪ್ರತಿದಿನವು ವರದಿ ಸಲ್ಲಿಸುವಂತೆ ತಿಳಿಸಿದರು.

ಚುನಾವಣಾ ಅಭ್ಯರ್ಥಿಗಳ ಪ್ರತಿದಿನದ ವಿವಿಧ ಕಾರ್ಯಕ್ರಮಗಳ, ಸಮಾರಂಭಗಳ ಚಟುವಟಿಕೆಗಳನ್ನು ಸರಿಯಾಗಿ ದಾಖಲಿಸಿಕೊಳ್ಳುವಂತೆ ಹಾಗೂ ವಿಡಿಯೋ ರೆಕಾರ್ಡಿಂಗ್ ಸಹ ಮಾಡುವಂತೆ ವಿಎಸ್‍ಟಿ, ಎಸ್‍ಎಸ್‍ಟಿ, ವಿವಿಟಿ ತಂಡಗಳಿಗೆ ಹಾಗೂ ಸಹಾಯಕ ವೆಚ್ಚ ಅಧಿಕಾರಿಗಳಿಗೆ ತಿಳಿಸಿದರು. ಖರ್ಚು ವೆಚ್ಚ ನಿಗಾ ತಂಡವು ಶಾಡೋ ರಿಜಿಸ್ಟರ್‍ನಲ್ಲಿ ಎಲ್ಲ ಖರ್ಚು ವೆಚ್ಚವನ್ನು ದಾಖಲಿಸುವಂತೆ ಸೂಚಿಸಿದರು.

ಧಾರವಾಡ ಜಿಲ್ಲೆಯು ಖರ್ಚು ವೆಚ್ಚ ಸೂಕ್ಷ್ಮ ಕೇಂದ್ರವೆಂದು ಪರಿಗಣಿಸಲಾಗಿದ್ದು, ಕಾನೂನು ಬಾಹಿರ ಖರ್ಚಿನ ಮೇಲೆ ತೀವ್ರ ನಿಗಾ ವಹಿಸಬೇಕು. ಚುನಾವಣೆಯನ್ನು ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ಜರುಗಿಸುವ ಹಿನ್ನೆಲೆಯಲ್ಲಿ ಅಭ್ಯರ್ಥಿಯ ಪ್ರತಿ ದಿನ ನಿತ್ಯದ ಖರ್ಚು ವೆಚ್ಚಗಳನ್ನು ಜಿಲ್ಲಾ ವೆಚ್ಚ ಸಮಿತಿಯು ನಿಗಾ ವಹಿಸಬೇಕು.

ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗುವ ಜಾಹಿರಾತುಗಳ ಖರ್ಚುವೆಚ್ಚಗಳನ್ನು ಎಮ್‍ಸಿಎಮ್‍ಸಿ ತಂಡವು ಪ್ರತಿದಿನ ವೆಚ್ಚ ನಿಗಾ ನೋಡಲ್ ಅಧಿಕಾರಿಗಳಿಗೆ ವರದಿ ಒಪ್ಪಿಸತಕ್ಕದ್ದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 24 ಚೆಕ್‌ ಪೋಸ್ಟ್‌ ಗಳು ಕಾರ್ಯನಿರ್ವಹಿಸುತ್ತಿದ್ದು, 57 ಎಫ್‍ಎಸ್‍ಟಿ, 72 ಎಸ್‍ಎಸ್‍ಟಿ ಕಾರ್ಯನಿರ್ವಹಿಸುತ್ತಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಮ್‍ಸಿಸಿ ನೋಡಲ್ ಅಧಿಕಾರಿ ಮೋನಾ ರಾವತ ಅವರು ತಿಳಿಸಿದರು.

ಜಿಲ್ಲೆಯ ಆದಾಯ ತೆರಿಗೆ, ವಾಣಿಜ್ಯ ತೆರಿಗೆ, ಹಾಗೂ ಬ್ಯಾಂಕ್‍ಗಳ ಪ್ರತಿನಿತ್ಯ ಹಣದ ವ್ಯವಹಾರಗಳ ಮೇಲೆ ನಿಗಾ ವಹಿಸಲಾಗುತ್ತಿದೆ. 10 ಲಕ್ಷ ಮೇಲ್ಪಟ್ಟ ವ್ಯವಹಾರಗಳನ್ನು ಆದಾಯ ತೆರಿಗೆ ಇಲಾಖೆ ನಿಗಾ ವಹಿಸುತ್ತಿದೆ ಎಂದು ಆದಾಯ ತೆರಿಗೆ ನೂಡಲ್ ಅಧಿಕಾರಿಗಳಾದ ಫಕ್ಕೀರೇಶ ಬಾದಾಮಿ ಅವರು ತಿಳಿಸಿದರು.

ಸಭೆಯ ನಂತರ ಜಿಲ್ಲಾ ನಿಯಂತ್ರಣ ಕೋಠಡಿಗೆ ಭೇಟಿ ನೀಡಿದ ಅವರು ಎಮ್‍ಸಿಎಮ್‍ಸಿ, ಸಾಮಾಜಿಕ ಜಾಲ ತಾಣ, ಸಿ-ವಿಜಿಲ್, ಸುವಿಧಾ, ದೂರ ನಿಯಂತ್ರಣ, ಟಿವಿ ಮಾಧ್ಯಮ ವೀಕ್ಷಣಾ ತಂಡಗಳ ಕಾರ್ಯಗಳನ್ನು ಪರಿಶೀಲಿಸಿದರು.

Chaitra Kulal

Recent Posts

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

13 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

15 mins ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

41 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

50 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

53 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

1 hour ago