News Karnataka Kannada
Thursday, April 18 2024
Cricket
ಹುಬ್ಬಳ್ಳಿ-ಧಾರವಾಡ

ಓಪಿಎಸ್ ಜಾರಿ ನಮ್ಮ ಗುರಿ, ನುಡಿದಂತೆ ನಡೆದಿದ್ದೇವೆ ಮತ್ತು ನಡೆಯುತ್ತೇವೆ: ಸಂತೋಷ ಲಾಡ್

ಸರಕಾರಿ ನೌಕರರು ಸಮಾಜದಲ್ಲಿ ಪ್ರಭಾವಯುತ ಸ್ಥಾನ, ವ್ಯಕ್ತಿತ್ವ ಹೊಂದಿದ್ದು, ಜನರಲ್ಲಿ ಹೆಚ್ಚು ಸಕಾರಾತ್ಮಕತೆ ಬೆಳೆಸಲು ಪ್ರಯತ್ನಿಸಬೇಕು. ರಾಜ್ಯ ಸರಕಾರ ನುಡಿದಂತೆ ನಡೆದಿದ್ದು, ರಾಜ್ಯ ಸರಕಾರಿ ನೌಕರರಿಗೆ ನೀಡಿದ್ದ, ಓಪಿಎಸ್ ಜಾರಿಗೆ ನಾವು ಬದ್ಧರಾಗಿದ್ದೇವೆ. ಅದಕ್ಕೆ ಕಾಲವಕಾಶ ಅಗತ್ಯವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.
Photo Credit : News Kannada

ಧಾರವಾಡ: ಸರಕಾರಿ ನೌಕರರು ಸಮಾಜದಲ್ಲಿ ಪ್ರಭಾವಯುತ ಸ್ಥಾನ, ವ್ಯಕ್ತಿತ್ವ ಹೊಂದಿದ್ದು, ಜನರಲ್ಲಿ ಹೆಚ್ಚು ಸಕಾರಾತ್ಮಕತೆ ಬೆಳೆಸಲು ಪ್ರಯತ್ನಿಸಬೇಕು. ರಾಜ್ಯ ಸರಕಾರ ನುಡಿದಂತೆ ನಡೆದಿದ್ದು, ರಾಜ್ಯ ಸರಕಾರಿ ನೌಕರರಿಗೆ ನೀಡಿದ್ದ, ಓಪಿಎಸ್ ಜಾರಿಗೆ ನಾವು ಬದ್ಧರಾಗಿದ್ದೇವೆ. ಅದಕ್ಕೆ ಕಾಲವಕಾಶ ಅಗತ್ಯವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಅವರು ಇಂದು ಬೆಳಿಗ್ಗೆ ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರಿ ನೌಕರ ಸಂಘದ ಧಾರವಾಡ ಜಿಲ್ಲಾ ಘಟಕ ಸಂಯುಕ್ತವಾಗಿ ಆಯೋಜಿಸಿದ್ದ ರಾಜ್ಯ ಸರಕಾರಿ ನೌಕರರ ಜಿಲ್ಲಾ ಕ್ರೀಡಾಕೂಟವನ್ನು ಉದ್ಘಾಟಿಸಿ, ಮಾತನಾಡಿದರು.

ಪ್ರತಿದಿನ ಒತ್ತಡಗಳಲ್ಲಿ ಕೆಲಸ ಮಾಡುವ ಸರಕಾರಿ ನೌಕರರು ಪ್ರತಿದಿನವೂ ಬಿಡುವು ಮಾಡಿಕೊಂಡು ವ್ಯಾಯಾಮ ಮಾಡುವ ಹವ್ಯಾಸ ರೂಢಿಸಿಕೊಳ್ಳಬೇಕು. ಎಲ್ಲರಿಗೂ ಆರೋಗ್ಯ ಮುಖ್ಯವಾಗಿದೆ ಎಂದು ಅವರು ಹೇಳಿದರು.

ಆರೋಗ್ಯ ಅತೀ ಮುಖ್ಯವಾಗಿರುವುದರಿಂದ ವ್ಯಾಯಾಮ, ಕ್ರೀಡೆಗಳ ಮೂಲಕ ಅದನ್ನು ಸದೃಢವಾಗಿ ಕಾಪಾಡಿಕೊಳ್ಳುವುದು ನಮ್ಮ ಜವಾಬ್ದರಿಯಾಗಿದೆ ಎಂದು ಅವರು ಹೇಳಿದರು.

ಉತ್ತಮ ಆರೋಗ್ಯಕ್ಕೆ ಒಳ್ಳೆಯ ಜೀವನ ಶೈಲಿ ಮುಖ್ಯವಾಗಿದೆ. ಆಹಾರ, ಓದು, ಸಂಗೀತ, ವಿಹಾರದಂತ ಹವ್ಯಾಸ ಬೆಳೆಸಿಕೊಳ್ಳಬೇಕು. ಮತ್ತು ತಮ್ಮ ಮಕ್ಕಳಲ್ಲಿ ರಾಷ್ಟಭಕ್ತಿ, ನೈತಿಕ ಶಿಕ್ಷಣ ಮೂಡಿಸುವ ಕಾರ್ಯವಾಗಬೇಕು ಎಂದು ಸಚಿವರು ತಿಳಿಸಿದರು.

ನವಲಗುಂದ ಶಾಸಕ ಎನ್. ಎಚ್. ಕೋನರಡ್ಡಿ ಅವರು ಮಾತನಾಡಿ, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿ ಲವಲವಿಕೆಯಿಂದ ದೈನಂದಿನ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ. ಹೀಗಾಗಿ ಸರಕಾರಿ ನೌಕರರು ಪ್ರತಿದಿನ ಕ್ರೀಡಾ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಸರ್ಕಾರಿ ನೌಕರರು ದಿನನಿತ್ಯ ಕಚೇರಿ ಕೆಲಸ ನಿರ್ವಹಣೆಯಲ್ಲಿ ಅನುಭವಿಸುವ ಒತ್ತಡವನ್ನು ಕಡಿಮೆಗೊಳಿಸಲು ಇಂತಹ ಕ್ರೀಡಾಕೂಟಗಳ ಅವಶ್ಯಕತೆ ಇದೆ. ದಿನದಲ್ಲಿ ಒಂದು ಗಂಟೆಯಾದರೂ ವ್ಯಾಯಾಮ ಮಾಡಬೇಕು ಹಾಗೂ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರಿಂದ ಒತ್ತಡದಿಂದ ಹೊರಬಂದು ಚೈತನ್ಯದಿಂದ ಕೆಲಸ ನಿರ್ವಹಿಸಬಹುದು ಎಂದು ಅವರು ಹೇಳಿದರು.

ಸರಕಾರಿ ಸೇವೆ ಜೀವನದ ಭಾಗ್ಯ; ಸಾರ್ಥಕ ಮಾಡೋಣ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಸರಕಾರಿ ನೌಕರರಾಗಿರುವುದು ನಮ್ಮ ಸೌಭಾಗ್ಯ. ಅದನ್ನು ಪ್ರಾಮಾಣಿಕವಾಗಿ, ಜನಪರವಾಗಿ ನಿರ್ವಹಿಸಿ, ಸಾರ್ಥಕಗೊಳಿಸೋಣ ಎಂದು ಹೇಳಿದರು.

ಸರಕಾರದ ಜನಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸುವ ಮಹತ್ವದ ಜವಾಬ್ದರಿ ನಮ್ಮೆಲ್ಲರ ಮೇಲಿದೆ. ಕಳೆದಹೋದ ಕೋವಿಡ್ ಸಂದರ್ಭ ಮತ್ತು ಬಂದಿರುವ ಬರಗಾಲ ಪರಿಸ್ಥಿತಿಯನ್ನು ಧಾರವಾಡ ಜಿಲ್ಲೆಯ ಎಲ್ಲ ಹಂತದ ಸರಕಾರಿ ನೌಕರರು ಸಮರ್ಥವಾಗಿ ನಿರ್ವಹಿಸಿದ್ದಾರೆ. ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವದರಿಂದ ಒತ್ತಡ ಕಳೆದುಹೋಗಿ, ಉತ್ತೇಜನ, ವಿಶ್ರಾಂತಿ ಸೀಗುತ್ತದೆ. ನೌಕರರು ಉತ್ತಮ ಆರೋಗ್ಯಕ್ಕಾಗಿ ಉತ್ತಮ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಸರ್ಕಾರಿ ನೌಕರರು ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿರಬೇಕು. ಸರ್ಕಾರಿ ನೌಕರರ ಮನಸ್ಥಿತಿ ಉತ್ತಮವಾಗಿದ್ದರೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ಸರಿಯಾದ ಪರಿಹಾರವನ್ನು ನೀಡಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಪ್ರತಿಯೊಬ್ಬರಿಗೂ ಕಷ್ಟಗಳು ಇರುತ್ತವೆ. ಅದಕ್ಕೆ ಸಮಾಧಾನದಿಂದ ಯೋಚಿಸಿ, ಪರಿಹಾರವನ್ನು ಕಂಡುಕೊಳ್ಳಬೇಕು. ಕಷ್ಟಗಳು ಬಂದಾಗ ಕುಗ್ಗದೆ, ಅದನ್ನು ಧೈರ್ಯದಿಂದ ಎದುರಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ಜಿಲ್ಲಾಧ್ಯಕ್ಷ ಎಸ್.ಎಫ್.ಸಿದ್ದನಗೌಡರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಗೌರವಾಧ್ಯಕ್ಷ ರಮೇಶ ಲಿಂಗದಾಳ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಯಡಳ್ಳಿ ವಂದಿಸಿದರು.

ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ಮೋಹನ ಶಿವಣ್ಣನವರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸದಾನಂದ ಅಮರಾಪುರ, ರಾಜ್ಯಪರಿಷತ್ ಸದಸ್ಯ ದೇವಿದಾಸ ಶಾಂತಿಕರ, ಹಿರಿಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸೊಲಗಿ, ಖಜಾಂಚಿ ರಾಜಶೇಖರ ಬಾಣದ, ನೌಕರಭವನದ ಕಾರ್ಯದರ್ಶಿ ಗಿರೀಶ ಚೌಡಕಿ, ಕ್ರೀಡಾ ಕಾರ್ಯದರ್ಶಿ ಲಕ್ಷ್ಮಣ ರಜಪೂತ, ಸುರೇಶ ಜಟ್ಟೆನ್ನವರ, ಸಾಂಸ್ಕೃತಿಕ ಕಾರ್ಯದರ್ಶಿ ಪಿ.ಬಿ.ಕುರಬೆಟ್ಟ, ಡಾ.ಬಿ.ಎಚ್.ಕುರಿಯವರ, ತಾಲೂಕು ಘಟಕಗಳ ಅಧ್ಯಕ್ಷರಾದ ಡಾ.ಪ್ರಲ್ಹಾದ ಗೆಜ್ಜಿ, ವ್ಹಿ.ಎಫ್.ಚುಳಕಿ,ಎ.ಬಿ.ಕೊಪ್ಪದ, ರಮೇಶಎಂ.ಹೊಲ್ತಿಕೋಟಿ, ಎಸ್.ಎನ್.ಅರಳಿಕಟ್ಟಿ ಹಾಗೂ ಇತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು