ಕಾರ್ಮಿಕರಿಗೆ ಮತದಾನ ದಿನ ಮೇ 7 ರಂದು ವೇತನ ಸಹಿತ ರಜೆ

ಧಾರವಾಡ : ಧಾರವಾಡ ಲೋಕಸಭಾ ಮತಕ್ಷೇತ್ರಕ್ಕೆ ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮೇ 07 ರಂದು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ 1951 ರ ಪ್ರಜಾ ಪ್ರತಿನಿಧಿ ಕಾಯ್ದೆ ಸೆಕ್ಷನ್ 135(ಬಿ) ರಡಿ ಹಾಗೂ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬ ರಜಾ ದಿನಗಳು) ಕಾಯ್ದೆ 1963 ಕಲಂ 3-ಎ ರನ್ವಯ ಸಂವಿಧಾನಾತ್ಮಕ ಅಥವಾ ಶಾಸನಾತ್ಮಕ ಹಕ್ಕು ಆಗಿರುವ ಮತವನ್ನು ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು, ನಿಯೋಜಕರು ಮತದಾನ ದಿನವಾದ 7 ರಂದು ವೇತನ ಸಹಿತ ರಜೆ ನೀಡಬೇಕು.

ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ ಹಾಗೂ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಧಾರವಾಡ ವಿಭಾಗದ ಹುಬ್ಬಳ್ಳಿಯ ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Chaitra Kulal

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

21 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

45 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

1 hour ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago