News Karnataka Kannada
Saturday, May 04 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ರಾಹುಲ್ ಗಾಂಧಿ ಮಾತಿಗೆ ಕರ್ನಾಟಕದ ಜನ ಬೆಲೆ ಕೊಡಲ್ಲ- ಸಿಎಂ

People of Karnataka will not pay any heed to Rahul Gandhi's words: CM
Photo Credit : News Kannada

ಹುಬ್ಬಳ್ಳಿ: ರಾಹುಲ್ ಕಳೆದ ಬಾರಿ ಬಂದದ್ದಕ್ಕೂ ಈ ಬಾರಿ ಬಂದದ್ದಕ್ಕೂ ಬಹಳ ವ್ಯತ್ಯಾಸವಿದೆ. ಈ ಬಾರಿ ಅವರು ಬ್ರಿಟನ್ ವಿವಿ ಯಲ್ಲಿ ಮಾತನಾಡಿದರು. ದೇಶ, ಪ್ರಜಾಪ್ರಭುತ್ವ ವಿರೋಧಿ ಮಾತುಗಳನ್ನಾಡಿದ್ದಾರೆ. ದೇಶವ್ಯಾಪ್ತಿ ಇದರ ಬಗ್ಗೆ ಖಂಡನೆಯಾಗಿದೆ. ರಾಹುಲ್ ಗಾಂಧಿ ಮಾತಿಗೆ ಕರ್ನಾಟಕದ ಜನ ಯಾವುದೇ ಬೆಲೆ ಕೊಡಲ್ಲ ಎಂದು ರಾಹುಲ್ ಗಾಂಧಿ ರಾಜ್ಯ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದರು.

ಹುಬ್ಬಳ್ಳಿ ಅವರ ನಿವಾಸ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಸಿದ್ಧರಾಮಯ್ಯ ಬೋಗಸ್ ಕಾರ್ಡ್ ಬಗ್ಗೆ ಮಾತನಾಡುತ್ತಿದ್ದರು. ಬೇರೆ ಬೇರೆ ರಾಜ್ಯಗಳಲ್ಲಿ ಈ ರೀತಿಯ ಆಶ್ವಾಸನೆಗಳನ್ನು ಕಾಂಗ್ರೆಸ್ ಈಡೇರಿಸಿಲ್ಲ. ರಾಜಾಸ್ತಾನ್, ಛತ್ತೀಸ್ ಘಡ ಮತ್ತಿತರ ಕಡೆ ಕೊಟ್ಟ ಆಶ್ವಾಸನೆ ಈಡೇರಿಸಿಲ್ಲ.‌ ಜನರನ್ನು ಯಾಮಾರಿಸುವ ಕೆಲಸ ಕಾಂಗ್ರೆಸ್ ಮಾಡ್ತಿದೆ. ಕಾಂಗ್ರೆಸ್ ನವರದ್ದು ಗ್ಯಾರಂಟಿ ಕಾರ್ಡ್ ಅಲ್ಲ, ಅದೊಂದು ವಿಜಿಟಿಂಗ್ ಕಾರ್ಡ್ ಸಿದ್ಧರಾಮಯ್ಯನವರ ವಿರುದ್ಧ ಸಾಕಷ್ಟು ಚಾರ್ಜ್ ಗಳಿವೆ ಲೋಕಾಯುಕ್ತದಲ್ಲಿಯೂ ದೂರಿದೆ. ಅಂಥವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ ಅಂದರೆ ಇದ್ಲಿ, ಮಸಿಗೆ ಬುದ್ಧಿ ಹೇಳಿದಂತೆ ಎಂದು ಅವರು ವ್ಯಂಗ್ಯವಾಡಿದರು.

ಭಾರತದಲ್ಲಿ ಕಾಂಗ್ರೆಸ್ ಪತನ ಶುರುವಾಗಿದೆ. ರೀಡೋ ವಾಚ್ ಬಗ್ಗೆ ನ್ಯಾಯಾಂಗ ತನಿಖೆ ಮಾಡುತ್ತಿದ್ದೇವೆ. ವಿಪಕ್ಷಗಳ 59 ಪ್ರಕರಣಗಳ ಪೈಕಿ ಕೆಲವನ್ನು ಲೋಕಾಯುಕ್ತಕ್ಕೆ ಕೊಟ್ಟಿದ್ದೇವೆ. ಕೆಲವನ್ನು ಮುಂದಿನ ದಿನಗಳಲ್ಲಿ ಕೊಡುತ್ತೇವೆ ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು