ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಜನರಿಗೆ ಅರ್ಥವಾಗಿದೆ: ಯಡಿಯೂರಪ್ಪ

ಹುಬ್ಬಳ್ಳಿ: ಯಾರಿಗೂ ಅನ್ಯಾಯವಾಗದಂತೆ ಮೀಸಲಾತಿ ಮುಂದುವರೆಸುತ್ತೇವೆ. ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದ್ದಾರೆ. ಅವರ ವೋಟ್ ಬ್ಯಾಂಕ್ ರಾಜಕಾರಣ ಜನರಿಗೆ ಅರ್ಥವಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು‌.

ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಬಾರಿ ಚುನಾವಣೆಯಲ್ಲಿ ಸುಮಾರು 140 ಸೀಟಿಗಿಂತಲೂ ಹೆಚ್ಚು ಸ್ಥಾನವನ್ನು ಗೆಲ್ಲುತ್ತೇವೆ ಎಂಬುವ ಭರವಸೆ ವ್ಯಕ್ತಪಡಿಸಿದರು.

ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಸಾಕಷ್ಟು ಅವಮಾನ ಮಾಡಿದೆ. ಜಗಜೀವನರಾಮ್ ಅವರಿಗೂ ಕೂಡ ಸಾಕಷ್ಟು ಅವಮಾನ ಮಾಡಿದವರು ಈ ಕಾಂಗ್ರೆಸ್ಸಿಗರು. ಬಂಜಾರ ಸಮುದಾಯದ ಜನರ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಸಾಕಷ್ಟು ಕೊಡುಗೆ ನೀಡಿದೆ ಎಂದರು.

ಎಸ್.ಸಿ, ಎಸ್.ಟಿ ಯಾವುದೇ ವರ್ಗದವರೂ ವಸತಿ ರಹಿತರಾಗಿ ಇರಬಾರದು ಅವರೆಲ್ಲರಿಗೂ ಸೂರನ್ನು ಕಲ್ಪಿಸುವ ಕಾರ್ಯವನ್ನು ಪ್ರಧಾನಮಂತ್ರಿ ಮಾಡುವ ಕನಸನ್ನು ಕಂಡಿದ್ದಾರೆ ಎಂದು ಅವರು ಹೇಳಿದರು.

ಸ್ಪೀಕರ್ ರಮೇಶಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಐವತ್ತು ವರ್ಷದಲ್ಲಿ ಜನರನ್ನು ಲೂಟಿ ಮಾಡಿದ್ದೀರಿ. ಕಾಂಗ್ರೆಸ್ ಲೂಟಿ ಮಾಡಿ ಯಾವ ಮುಖ ಇಟ್ಟುಕೊಂಡು ವೋಟ್ ಕೇಳುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

Sneha Gowda

Recent Posts

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

4 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

17 mins ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

35 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

46 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

1 hour ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

1 hour ago