News Karnataka Kannada
Saturday, April 27 2024
ಹುಬ್ಬಳ್ಳಿ-ಧಾರವಾಡ

ಐದು ವರ್ಷದೊಳಗಿನ 2,05,113 ಮಕ್ಕಳಿಗೆ ಲಸಿಕೆ ಹಾಕುವ ಗುರಿ : ಜಿಲ್ಲಾಧಿಕಾರಿ

ರಾಷ್ಟ್ರೀಯ ಲಸಿಕಾ ದಿನ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ನಿಗಧಿತ ಗುರಿಯನ್ನು ಶೇ. 100 ರಷ್ಟು ಸಾಧಿಸಲು ಅಗತ್ಯವಿರುವ ಕ್ರೀಯಾ ಯೋಜನೆ ಹಾಗೂ ಸಿದ್ಧತೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಇತರ ಇಲಾಖೆಗಳ ಸಹಯೋಗದಲ್ಲಿ ಯಶಸ್ವಿಯಾಗಿ ಸಂಘಟಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
Photo Credit : News Kannada

ಧಾರವಾಡ : ರಾಷ್ಟ್ರೀಯ ಲಸಿಕಾ ದಿನ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ನಿಗಧಿತ ಗುರಿಯನ್ನು ಶೇ. 100 ರಷ್ಟು ಸಾಧಿಸಲು ಅಗತ್ಯವಿರುವ ಕ್ರೀಯಾ ಯೋಜನೆ ಹಾಗೂ ಸಿದ್ಧತೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಇತರ ಇಲಾಖೆಗಳ ಸಹಯೋಗದಲ್ಲಿ ಯಶಸ್ವಿಯಾಗಿ ಸಂಘಟಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಅವರು ಇಂದು ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ 2024ನೇ ಸಾಲಿನ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಮಾರ್ಚ್ 3 ರಂದು ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಐದು ವರ್ಷದೊಳಗಿನ 2,05,113 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಲಾಗಿದೆ. ಒಟ್ಟು 891 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, 92 ಟ್ರಾಂಜಿಸ್ಟ್ ತಂಡಗಳನ್ನು ನೇಮಿಸಲಾಗಿದೆ. ಮತ್ತು 57 ಮೊಬೈಲ್ ತಂಡಗಳನ್ನು ಸಹ ರಚಿಸಲಾಗಿದೆ. ಪಲ್ಸ್ ಪೋಲಿಯೋ ಯಶಸ್ವಿಗಾಗಿ 3,822 ಜನ ವ್ಯಾಕ್ಸಿನೇಟರ್ಸ್ ಮತ್ತು 212 ಜನ ಮೇಲ್ವಿಚಾರಕರನ್ನು ನೇಮಿಸಲಾಗಿದೆ. 4 ದಿನಗಳ ಈ ಲಸಿಕಾ ಅಭಿಯಾನದಲ್ಲಿ ಒಟ್ಟು 4,21,180 ಮನೆಗಳಿಗೆ ಆರೋಗ್ಯ ಕಾರ್ಯಕರ್ತರು ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ಧಾರವಾಡ ಜಿಲ್ಲೆಗೆ ಈ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ವಿವಿಧ ಇಲಾಖೆಗಳ 189 ವಾಹನಗಳನ್ನು ಬಳಸಿಕೊಳ್ಳಲಾಗುತ್ತಿದೆ. ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕಾರ ನೀಡಿದಲ್ಲಿ ಧಾರವಾಡ ಜಿಲ್ಲೆಯನ್ನು ಪೋಲಿಯೋ ಮುಕ್ತ ಜಿಲ್ಲೆಯನ್ನಾಗಿ ಘೋಷಿಸಬಹುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೊಳ್ಳಿಸಲು ತಾಲೂಕು ಹಾಗೂ ಜಿಲ್ಲಾ ಹಂತದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. ಜಿಲ್ಲೆಯಲ್ಲಿ ಮಾರ್ಚ್ 3 ರಿಂದ 6 ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ತಾಲೂಕು ಮಟ್ಟದಲ್ಲಿ ಸಭೆಗಳನ್ನು ಕೈಗೊಂಡು ಸಂಬಂಧಪಟ್ಟ ಇಲಾಖೆಗಳ ಸಹಭಾಗಿತ್ವದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ, ಜಿಲ್ಲೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೊಳಿಸಲು ಗ್ರಾಮ ಪಂಚಾಯತಿ, ನಗರಸಭೆ, ಪುರಸಭೆ, ವಿವಿಧ ಇಲಾಖೆಗಳನ್ನು ಒಳಗೊಂಡು ಲಸಿಕಾ ದಿನದ ಪ್ರಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಮಾರ್ಚ್ 3 ರಂದು ಬೂತ್‍ಗಳಲ್ಲಿ, ಅಂಗನವಾಡಿ ಕೇಂದ್ರಗಳಲ್ಲಿ, ಸಾರ್ವಜನಿಕ ಸ್ಥಳಗಳಾದ ಜಾತ್ರೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಸಂತೆಗಳಲ್ಲಿ ಪಲ್ಸ್ ಪೋಲಿಯೋ ಹನಿಯನ್ನು ಐದು ವರ್ಷದೊಳಗಿನ ಮಕ್ಕಳಿಗೆ ನೀಡಲಾಗುತ್ತದೆ. ನಂತರ ಮಾರ್ಚ್ 4, 5 ಮತ್ತು 6 ರಂದು ಎರಡನೇ ಸುತ್ತಿನಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡುವ ಮೂಲಕ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ನೀಡಲಿದ್ದಾರೆ ಎಂದು ಅವರು ತಿಳಿಸಿದರು.
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರವನ್ನು ಯಶಸ್ವಿಗೊಳಿಸಲು ಶಾಲಾ ಶಿಕ್ಷಣ ಇಲಾಖೆ, ಗ್ರಾಮೀಣ ಅಭಿವೃಧ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಹಕಾರ ನೀಡಿ, ಸಮನ್ವಯ ಸಾಧಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ.ಅವರು ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಸಾಲಿಗಿಂತ ಪ್ರಸಕ್ತ ಸಾಲಿನಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಶೇ. 100 ರಷ್ಟು ಗುರಿ ಸಾಧಿಸಲು ಕ್ರಮ ವಹಿಸಲಾಗಿದೆ. ಸಾರ್ವಜನಿಕರಲ್ಲಿ ಗ್ರಾಮ ಪಂಚಾಯತಿಗಳ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಾಟೀಲ ಶಶಿ ಅವರು ಸ್ವಾಗತಿಸಿದರು. ಜಿಲ್ಲಾ ಆರ್‍ಸಿಎಚ್‍ಓ ಅಧಿಕಾರಿ ಡಾ. ಸುಜಾತಾ ಹಸವಿಮಠ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪಲ್ಸ್ ಪೋಲಿಯೋ ಕಾರ್ಯಕ್ರಮದ ಆಯೋಜನೆ ಕುರಿತು ಸಭೆಯಲ್ಲಿ ವಿವರಿಸಿದರು.
ಜಿಲ್ಲಾಧಿಕಾರಿಗಳು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪ್ರಚಾರ ಸಾಮಗ್ರಿಗಳನ್ನು ಸಭೆಯಲ್ಲಿ ಬಿಡಗಡೆ ಮಾಡಿದರು.

ಸಭೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸಂಗಪ್ಪಾ ಗಾಬಿ, ಆರೋಗ್ಯ ಇಲಾಖೆಯ ಎಲ್ಲ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು, ತಾಲೂಕು ಮುಖ್ಯ ವೈದ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು