ಹುಬ್ಬಳ್ಳಿ: ಪಾಕ್ ಪರ ಘೋಷಣೆಗೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ನಾಸಿರ್ ಹುಸೇನ್ ಬೇಷರತ್ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಗೂ ಪತ್ರಕರ್ತರಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ನಾಸಿರ್ ಸಾರ್ವಜನಿಕವಾಗಿ ಕ್ಷಮೆ ಕೇಳಲೇಬೇಕು ಎಂದು ಆಗ್ರಹಿಸಿದರು.
ಪಾಕಿಸ್ತಾನ ಜಿಂದಾಬಾದ್ ಘೋಷಣೆಕಾರ ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ಹತ್ತಿರದವನು. ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಮತ್ತು ನಾಸಿರ್ ಅಕ್ಕ-ಪಕ್ಕದಲ್ಲೇ ಇರುತ್ತಿದ್ದವನು ಎಂಬುದು ಸ್ಪಷ್ಟವಾಗಿದೆ. ಕಾಂಗ್ರೆಸ್ ಕೂಡ ಕ್ಷಮೆ ಕೇಳಬೇಕು. ಕ್ಷಮೆ ಕೇಳುವವರೆಗೂ ನಾಸೀರ್ ಹುಸೇನ್ ಪ್ರಮಾಣ ವಚನ ಸ್ವೀಕರಿಸಬಾರದು ಎಂದರು.