ಪಿ.ಆರ್.ಓ, ಎಪಿಆರ್‍ಓಗಳು ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕು: ಡಿಸಿ ದಿವ್ಯ ಪ್ರಭು

ಧಾರವಾಡ : ಧಾರವಾಡ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗಾಗಿ ಮತಗಟ್ಟೆಗಳಿಗೆ ನೇಮಕವಾಗಿರುವ ಮತಗಟ್ಟೆ ಅಧ್ಯಕ್ಷಾಧಿಕಾರಿ ಮತ್ತು ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿಗಳು ನಿಷ್ಪಕ್ಷಪಾತವಾಗಿ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಅವರು ನಗರದ ವಿದ್ಯಾಗಿರಿಯ ಜೆ.ಎಸ್.ಎಸ್ ಮಹಾವಿದ್ಯಾಲಯದ ಆವರಣದಲ್ಲಿ ಧಾರವಾಡ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತಗಟ್ಟೆಗಳಿಗೆ ನೇಮಕವಾಗಿರುವ ಮತಗಟ್ಟೆ ಅಧ್ಯಕ್ಷಾಧಿಕಾರಿ ಮತ್ತು ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿಗಳಿಗೆ ಆಯೋಜಿಸಿದ್ದ ಮೊದಲ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರನ್ನು ಉದ್ದೇಶಿಸಿ, ಮಾತನಾಡಿದರು.

ಮತದಾನ ನಡೆಯುವ ವೇಳೆ ಮತದಾರರಿಗೆ ಯಾವುದೇ ಅಡತಡೆಯಾಗದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ಪೂರ್ವಭಾವಿಯಾಗಿ ಎರಡು ಹಂತದ ತರಬೇತಿ ನೀಡಲಾಗುತ್ತಿದ್ದು, ಇದು ಮೊದಲ ಹಂತವಾಗಿದೆ. ಅಧಿಕಾರಿಗಳಿಗೆ ಮತಯಂತ್ರಗಳ ಮಾದರಿ, ಬಳಕೆ ಮಾಡುವ ವಿಧಾನ ಕುರಿತು ನುರಿತ ತಜ್ಞರು ತರಬೇತಿ ನೀಡುತ್ತಾರೆ ಎಂದರು.

ಇವ್ಹಿಎಂ, ವಿವಿ ಪ್ಯಾಟ್ ಮಷಿನ್‍ಗಳನ್ನು ಮಗುವಿನಂತೆ ಜೋಪಾನ: ಮತದಾನ ದಿನದಂದು ಬಳಕೆ ಮಾಡಲು ಪೂರೈಸುವ ಇವ್ಹಿಎಂ ಮತ್ತು ವಿವಿ ಪ್ಯಾಟ್ ಮಷಿನ್‍ಗಳನ್ನು ಜಾಗರೂಕತೆಯಿಂದ ನಿಭಾಯಿಸಬೇಕು. ತರಬೇತಿ ದಿನಗಳಂದು ನೀಡುವ ಪ್ರಾಯೋಗಿಕ ತರಬೇತಿಯಲ್ಲಿ ಮಷಿನ್‍ಗಳ ನಿರ್ವಹಣೆ ಕುರಿತು ಸರಿಯಾಗಿ ತಿಳಿದುಕೊಳ್ಳಬೇಕು.

ಮತದಾನ ದಿನದಂದು ಆಕಸ್ಮಿಕವಾಗಿ ತಾಂತ್ರಿಕ ತೊಂದರೆಗಳು ಉಂಟಾದಲ್ಲಿ ತಮ್ಮ ಸೆಕ್ಟರ್ ಅಧಿಕಾರಿಗೆ ಕರೆ ಮಾಡಿ, ತಕ್ಷಣ ತಿಳಿಸಬೇಕು ಮತ್ತು ಅವರ ನೆರವಿನಲ್ಲಿ ಸರಿಪಡಿಸಿಕೊಳ್ಳಬೇಕು. ಇವ್ಹಿಎಂ ಮತ್ತು ವಿವಿ ಪ್ಯಾಟ್ ಮಷಿನ್‍ಗಳು ಚುನಾವಣೆಯ ಮುಖ್ಯ ಭಾಗಗಳಾಗಿರುವದರಿಂದ ಮಗುವಿನಂತೆ ಜೋಪಾನ ಮಾಡಿಕೊಂಡು, ಸುಸ್ಥಿತಿಯಲ್ಲಿ ಇರುವಂತೆ ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಪಿಆರ್.ಓ, ಮತಗಟ್ಟೆ ತಂಡದ ನಾಯಕ: ಪ್ರತಿ ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುವ ಮತಗಟ್ಟೆ ಅಧ್ಯಕ್ಷಾಧಿಕಾರಿ  ಆ ಮತಗಟ್ಟೆಯ ತಂಡದ ನಾಯಕ. ಮತಗಟ್ಟೆಯ ಎಲ್ಲ ಸಿಬ್ಬಂದಿ, ಮತಗಟ್ಟೆಯ ಬಗ್ಗೆ ಮಾಹಿತಿ ಗೊತ್ತಿರಬೇಕು. ಪಿಓ ಹ್ಯಾಂಡ್ ಬುಕ್ಕ್ ಸರಿಯಾಗಿ ಓದಿ, ತಮ್ಮಕರ್ತವ್ಯ, ಜವಾಬ್ದರಿ ಮತ್ತು ಇತರ ಕೆಲಸಗಳ ಬಗ್ಗೆ ತಿಳಿದಿರಬೇಕು. ಅಂದಾಗ ಸೂಸುತ್ರವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಮತದಾನಕ್ಕೆ ಮತದಾರ ಪಟ್ಟಿಯೇ ಮೂಲ ಆಧಾರ: ಯಾವುದೇ ಅರ್ಹ ಮತದಾರ ಮತದಾನ ಮಾಡಲು ಬಂದಲ್ಲಿ ಆ ಮತಗಟ್ಟೆಯ ಮತದಾರ ಪಟ್ಟಿಯಲ್ಲಿ ಅವನ ಹೆಸರು ಇರುವುದು ಕಡ್ಡಾಯ. ಮತದಾನ ದಿನದಂದು ಪ್ರಸ್ತುತ ಮತ್ತು ಚಾಲ್ತಿಯಲ್ಲಿರುವ ಮತದಾರ ಪಟ್ಟಿಯಲ್ಲಿ ಮತದಾನಕ್ಕೆ ಬರುವ ವ್ಯಕ್ತಿಯ ಹೆಸರು ಇರಬೇಕು.

ಡಿಮಾಸ್ಟ್ರಿಂಗ್ ಸುಲಭಗೊಳಿಸಲು ಕ್ರಮ: ಪಿಆರ್.ಓ ಗಳಿಗೆ ಮಾಸ್ಟ್ರಿಂಗ್ ಮತ್ತು ಡಿಮಾಸ್ಟ್ರಿಂಗ್ ಸುಲಭವಾಗಿ ಮಾಡಿಕೊಡಲು ಅಗತ್ಯ, ನುರಿತ ಸಿಬ್ಬಂದಿಗಳನ್ನು ನೇಮಿಸಲಾಗುವುದು. ಡಿಮಾಸ್ಟ್ರಿಂಗ್ ವ್ಯವಸ್ಥಿವಾಗಿ ನಿರ್ವಹಿಸಲು ಸೆಕ್ಟರ್ ಆಫೀಸರ್‍ಗಳಿಗೆ ಅಗತ್ಯ ಮಾರ್ಗದರ್ಶನ ಮತ್ತು ನುರಿತ ಸಿಬ್ಬಂದಿಗಳನ್ನು ನೇಮಿಸಲಾಗುತ್ತದೆ. ಎಲ್ಲರೂ ಸಹಕರಿಸಿ, ಚುನಾವಣೆ ಯಶಸ್ವಿಗೊಳಿಸಲು ಕೈ ಜೋಡಿಸಿ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಸಹಾಯಕ ಚುನಾವಣಾಧಿಕಾರಿಗಳಾದ ಪ್ರಿಯಾಂಗಾ ಎಂ., ಶಾಲಂ ಹುಸೇನ್, ನೋಡಲ್ ಅಧಿಕಾರಿ ಅಜೀಜ್ ದೇಸಾಯಿ, ತಹಶಿಲ್ದಾರ ಡಾ.ಡಿ.ಎಚ್.ಹೂಗಾರ, ಮಹಾನಗರ ಪಾಲಿಕೆ ವಲಯ ಅಧಿಕಾರಿ ಶಂಕರಗೌಡ ಪಾಟೀಲ, ಚುನಾವಣಾ ವಿಭಾಗದ ಅಧಿಕಾರಿ ಉಮೇಶ ಸವಣೂರ, ಕಂದಾಯ ನಿರೀಕ್ಷಕ ಗುರು ಸುಣಗಾರ, ಸಂಪತ್ತಕುಮಾರ ವಡೆಯರ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Chaitra Kulal

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

10 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

10 hours ago