ಧಾರವಾಡ : ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಖಾತ್ರಿ ಪಡಿಸುವಂತೆ ಒತ್ತಾಯಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.
ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಮುಂದುವರೆಸಬೇಕು ಹಾಗೂ ಎಲ್ಲ ಅರ್ಹ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿಗಳಿಗೆ ಸರ್ಕಾರ ವಿದ್ಯಾರ್ಥಿ ವೇತನ ಖಾತ್ರಿ ಪಡಿಸಬೇಕು ಈ ಕುರಿತು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ವಿದ್ಯಾರ್ಥಿಗಳ ಭವಿಷ್ಯಕ್ಕೆ ಅನುಕೂಲ ಆಗುವಂತೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರ ವಿದ್ಯಾರ್ಥಿ ವೇತನ ನೀಡುವ ಮೂಲಕ ಆರ್ಥಿಕ ನೆರವು ನೀಡುವುದರಿಂದ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಲು ಅನುಕೂಲ ಆಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡು ಸೂಕ್ತ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.